Jannah Theme License is not validated, Go to the theme options page to validate the license, You need a single license for each domain name.
ಬೆಂಗಳೂರುರಾಜಕೀಯರಾಜ್ಯಸ್ಥಳೀಯ ಸುದ್ದಿ

ಪತ್ರಕರ್ತರಿಗೆ CM.ಸಿದ್ಧರಾಮಯ್ಯ: ಅಭಯ!

KUWJ ನಿಯೋಗದಿಂದ ಮುಖ್ಯಮಂತ್ರಿ ಸಿದ್ಧರಾಮಯ್ಯ ಭೇಟಿ ಚರ್ಚೆ!

Powercity Newsಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಿವಾನಂದ ತಗಡೂರು ಅವರ ನೇತೃತ್ವದ ನಿಯೋಗವು ಇಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಅಭಿನಂದನೆ ಸಲ್ಲಿಸಿತು.

ರಾಜ್ಯದ ಪತ್ರಕರ್ತರ ಕ್ಷೇಮಾಭಿವೃದ್ಧಿ ಗಾಗಿ 500 ಕೋಟಿ ರೂ.ಗಳ ಅನುದಾನವನ್ನು ಮೀಸಲಿಡುವುದಾಗಿ ಚುನಾವಣಾ ಪ್ರಣಾಳಿಕೆಯಲ್ಲಿ ಘೋಷಿಸಿರುವುದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸಿದರು.

ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ ಪಾಸ್, ಯಶಸ್ವಿನಿ ಯೋಜನೆಗೆ ಪತ್ರಕರ್ತರ ಸೇರ್ಪಡೆ, ಮಾಶಾಸನ ಹೆಚ್ಚಳ, ಕಾರ್ಮಿಕ ಇಲಾಖೆಯ ಮೂಲಕ ಅಗತ್ಯ ಸೌಲಭ್ಯಗಳು, ಸೇರಿದಂತೆ ಇನ್ನೀತರ ಬೇಡಿಕೆಗಳ ಬಗ್ಗೆ ಮುಖ್ಯಮಂತ್ರಿಗಳ ಗಮನ ಸೆಳೆದು, ಮನವಿ ಅರ್ಪಿಸಲಾಯಿತು.

ಜಿಲ್ಲಾ ಮತ್ತು ಪ್ರಾದೇಶಿಕ ಪತ್ರಿಕೆಗಳಿಗೆ ತಾರತಮ್ಯ ಇಲ್ಲದಂತೆ ಜಾಹಿರಾತು ಬಿಡುಗಡೆ, ಬಾಕಿ ಬಿಲ್ ಮಂಜೂರು ಹಾಗೂ ಪ್ರೋತ್ಸಾಹದಾಯಕ ಜಾಹಿರಾತುಗಳಿಗೆ ಆಯವ್ಯಯದಲ್ಲಿ ಅನುದಾನ ಮೀಸಲಿಡಲು ಕೋರಲಾಯಿತು. ಮನವಿಯಲ್ಲಿನ ಬೇಡಿಕೆಗಳ ಕುರಿತು ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.

ಸಂಘದ ಉಪಾಧ್ಯಕ್ಷರಾದ ಅಜ್ಜಮಾಡ ರಮೇಶ್ ಕುಟ್ಟಪ್ಪ, ಭವಾನಿ ಸಿಂಗ್ ಠಾಕೂರ್, ಪ್ರಧಾನ ಕಾರ್ಯದರ್ಶಿ ಜೆ.ಸಿ.ಲೋಕೇಶ್, ಕಾರ್ಯದರ್ಶಿಗಳಾದ ಮತ್ತೀಕೆರೆ ಜಯರಾಮ್, ಸೋಮಶೇಖರ ಕೆರಗೋಡು, ನಿಂಗಪ್ಪ ಚಾವಡಿ, ಜಿಲ್ಲಾ ಪದಾಧಿಕಾರಿಗಳಾದ ದಿನೇಶ್ ಗೌಡಗೆರೆ, ಶಿವಕುಮಾರ ಸ್ವಾಮಿ, ಚಲುವರಾಜು, ಸಿ.ಎನ್.ಕುಮಾರ್, ಸೋಮಶೇಖರ ಗಾಂಧಿ, ಜುಕ್ರಿಯಾ, ರಾಜು, ರಾಯಚೂರು ವೀರಾ ರೆಡ್ಡಿ ಮೊದಲಾದವರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *