ಸ್ಥಳೀಯ ಸುದ್ದಿ
ಒಂದೇ ಕುಟುಂಬದ ಮೂವರು ಸಾವು
ಹುಬ್ಬಳ್ಳಿ
ಹುಬ್ಬಳ್ಳಿ ಹೊರವಲಯದ ಪುಣೆ- ಬೆಂಗಳೂರು ರಸ್ತೆಯಲ್ಲಿ ಭೀಕರ ಅಪಘಾತ ಸಂಭವಿಸಿ
ಒಂದೇ ಕುಟುಂಬದ ಮೂವರು ಸಾವನ್ನಪ್ಪಿ, ಓರ್ವ ಮಹಿಳೆ ಗಂಭೀರವಾಗಿ ಗಾಯಗೊಂಡಿರುವ ಘಟನೆ ಹುಬ್ಬಳ್ಳಿ ಸಮೀಪ ಜಿಗಳೂರ ಗ್ರಾಮದ ಸಮೀಪ ನಡೆದಿದೆ.
ಬೆಂಗಳೂರಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಕಾರು ಚಾಲಕನ ನಿಯಂತ್ರಣ ತಪ್ಪಿ ದರ್ಗಾಗೆ ಗುದ್ದಿದ್ದ ಪರಿಣಾಮ, ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.
ಪತಿ,ಪತ್ನಿ ಅಳಿಯ ಸ್ಥಳದಲ್ಲಿಯೇ ಸಾವನ್ನಪ್ಪಿದ್ದಾರೆ.
ಹನಮಂತಪ್ಪ ಬೇವಿನಕಟ್ಟಿ, ಪತ್ನಿ ರೇಣುಕಾ ಬೇವಿನಕಟ್ಟಿ, ಅಳಿಯ ರವೀಂದ್ರ ಮೃತಪಟ್ಟಿದ್ದು
ಬೆಂಗಳೂರಿನಲ್ಲಿ ಗೃಹ ಪ್ರವೇಶ ಮುಗಿಸಿ ಹುಬ್ಬಳ್ಳಿಗೆ ವಾಪಸ್ಸಾಗುತ್ತಿದ್ದಾಗ ಅವಘಡ ಸಂಭವಿಸಿದೆ. ಮೃತರ ಶವವನ್ನು ಕಿಮ್ಸ್ ಶವಾಗಾರದಲ್ಲಿ ಇರಿಸಲಾಗಿದೆ.
ಈ ಸಂಬಂಧ ಕುಂದಗೋಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.