ಸ್ಥಳೀಯ ಸುದ್ದಿ

ಕಿಟೆಲ್ ವಿಜ್ಞಾನ ಮಹಾವಿದ್ಯಾಲಯದ ಪ್ರಾಧ್ಯಾಪಕನಿಗೆ ರಾಷ್ಟ್ರೀಯ ಪ್ರಶಸ್ತಿ

ಧಾರವಾಡ

ಅಸೋಸಿಯೇಷನ್ ಆಫ್ ಮುಸ್ಲಿಂ ಪ್ರೊಫೆಷನಲ್ ವತಿಯಿಂದ 2022 ರ ನ್ಯಾಷನಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಎಜುಕೇಶನ್ ಪ್ರಶಸ್ತಿಯನ್ನು, ಶಿಕ್ಷಕರ ದಿನಾಚರಣೆಯ ಅಂಗವಾಗಿ, ಶಿಕ್ಷಣ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರಿಗೆ, ಉಪನ್ಯಾಸಕರಿಗೆ ಹಾಗೂ ಶಿಕ್ಷಣ ಸಂಸ್ಥೆಯ ಸಂಸ್ಥಾಪಕರಿಗೆ ನೀಡಲಾಗುತ್ತದೆ.

ಈ ವರ್ಷ 10 ವಿದ್ಯಾಸಂಸ್ಥೆಗಳನ್ನು,5 ಲೈಫ್ ಟೈಮ್ ಅಚೀವ್ಮೆಂಟ್ ಪ್ರಶಸ್ತಿಗಳನ್ನು ಹಾಗೂ 100 ಅತ್ಯುತ್ತಮ ಶಿಕ್ಷಕರನ್ನು ಅವರ ಸಾಧನೆಗಳ ಆಧಾರದ ಮೇಲೆ ರಾಷ್ಟ್ರಮಟ್ಟದ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

ಮಹಾವಿದ್ಯಾಲಯ ಹಾಗೂ ವಿಶ್ವವಿದ್ಯಾಲಯಗಳ ಅತ್ಯುತ್ತಮ ಶಿಕ್ಷಕ ಪ್ರಶಸ್ತಿಯನ್ನು ಕರ್ನಾಟಕ ರಾಜ್ಯದಿಂದ, ಧಾರವಾಡ ಜಿಲ್ಲೆಯ ಕಿಟಲ್ ವಿಜ್ಞಾನ ಮಹಾವಿದ್ಯಾಲಯದ ರಸಾಯನಶಾಸ್ತ್ರ ಉಪನ್ಯಾಸಕರಾದ ಶ್ರೀ ಜಾವೇದ್ ಇಸ್ಮಾಯಿಲ್ ಮುಡಿ ಇವರನ್ನು,.. ಅಧ್ಯಯನ, ಸಂಶೋಧನೆ ಹಾಗೂ ಶಿಕ್ಷಣ ಕ್ಷೇತ್ರದಲ್ಲಿ ಇವರ ಕೊಡುಗೆಯನ್ನು ಗುರುತಿಸಿ ಪ್ರಸ್ತುತ ವರ್ಷದ ನ್ಯಾಷನಲ್ ಅವಾರ್ಡ್ ಫಾರ್ ಎಕ್ಸಲೆನ್ಸ್ ಇನ್ ಎಜುಕೇಶನ್ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button