Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಕಿತ್ತೂರಿನಲ್ಲಿ 75 ನೇ ವರ್ಷದ ಸ್ವಾತಂತ್ರ್ಯ ವಜ್ರಮಹೋತ್ಸವ ಕಾರ್ಯಕ್ರಮ

ಬೆಂಗಳೂರು

ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ ಅವರ ಸಾರಥ್ಯದಲ್ಲಿ ಕೈ ಪಡೆ ರಾಜ್ಯದ್ಯಂತ ಪಕ್ಷ ಕಟ್ಟುವ ಕೆಲಸ ಮಾಡುತ್ತಿದೆ.

ಈ ಹಿನ್ನೆಲೆಯಲ್ಲಿ ಸ್ವಾತಂತ್ರ್ಯ ಸಿಕ್ಕು 75 ನೇ ವರ್ಷದ ವಜ್ರಮಹೋತ್ಸವ ಹಿನ್ನೆಲೆಯಲ್ಲಿ ಚೆನ್ನಮ್ಮನ ನಾಡು ಕಿತ್ತೂರಿನಲ್ಲಿ ಕಾಂಗ್ರೆಸ್ ನಾಯಕರು ಕಾರ್ಯಕ್ರಮ ನಡೆಸಿದ್ರು.

ಈ ಕಾರ್ಯಕ್ರಮದಲ್ಲಿ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ , ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಮಾಜಿ ಸಚಿವ ವಿನಯ ಕುಲಕರ್ಣಿ, ಶಾಸಕರಾದ ಪ್ರಸಾದ ಅಬ್ಬಯ್ಯಾ, ಕುಸಮಾವತಿ ಶಿವಳ್ಳಿ, ಚೆನ್ನರಾಜ ಹಟ್ಟಿಹೊಳಿ, ಮಾಜಿ ಶಾಸಕ ಎನ್.ಎಚ್.ಕೊನರೆಡ್ಡಿ, ಮುಖಂಡರಾದ ಬಾಬಾಸಾಹೇಬ ಪಾಟೀಲ್, ಸೇರಿದಂತೆ ಇತರರು ಹಾಜರಿದ್ದರು.

ಈ ಸಂದರ್ಭದಲ್ಲಿ ಡಿಕೆ ಶಿವಕುಮಾರ ಅವರನ್ನು ಚೆನ್ನಮ್ಮನ ಫೋಟೊ ಹಾಗೂ ಖಡ್ಗ ಕೊಟ್ಟು ಸನ್ಮಾನಿಸಿ ಗೌರವಿಸಲಾಯಿತು.

ಕಾರ್ಯಕ್ರಮದಲ್ಲಿ ಮಾಜಿ ಸಚಿವರನ್ನು ನೋಡಲು ಬಂದಿದ್ದ ಅವರ ಅಭಿಮಾನಿ ಬಳಗ ಹಾಗೂ ಕ್ಷೇತ್ರದ ಜನರನ್ನು ನೋಡಿದ್ರೆ ಇವರ ಜನಪ್ರೀಯತೆ ಧಾರವಾಡ ಜಿಲ್ಲೆಯಲ್ಲಿ ಎಷ್ಟಿದೆ ಎನ್ನುವುದು ಕಾರ್ಯಕ್ರಮಕ್ಕೆ ಬಂದಿದ್ದ ನಾಯಕರುಗಳಿಗೆ ಮನದಟ್ಟು ಆಗುವಂತೆ ಇತ್ತು…

ಪವರ ಸಿಟಿ ನ್ಯೂಸ್ ಕನ್ನಡ
ಸತ್ಯ ಸದಾಕಾಲ

Related Articles

Leave a Reply

Your email address will not be published. Required fields are marked *