ಸ್ಥಳೀಯ ಸುದ್ದಿ
ಕುರುಬಗಟ್ಟಿ ಗ್ರಾಮ ಪಂಚಾಯತ್ ಕಾಂಗ್ರೆಸ್ ತೆಕ್ಕೆಗೆ
ಧಾರವಾಡ
ಧಾರವಾಡ ತಾಲೂಕಿನ ಕುರುಬಗಟ್ಟಿ ಗ್ರಾಮ ಪಂಚಾಯತಿ ಅಧ್ಯಕ್ಷ ಸ್ಥಾನ ಕಾಂಗ್ರೆಸ್ ಪಾಲಾಗುವುದರ ಜೋತೆಗೆ ಗ್ರಾಮೀಣ ಕ್ಷೇತ್ರದ ಬಿಜೆಪಿ ಶಾಸಕರಿಗೆ ಹಿನ್ನಡೆಯಾಗಿದೆ.
ಒಟ್ಟು 17 ಸದಸ್ಯರ ಬಲದ ಪಂಚಾಯಿತಿಯಲ್ಲಿ 10 ಜನರ ಸಂಖ್ಯಾಬಲ ಹೊಂದಿರುವ ಕಾಂಗ್ರೆಸ್ ಪಕ್ಷದ ಬೆಂಬಲಿತ ಸದಸ್ಯರುಗಳು ಅಧ್ಯಕ್ಷ ಸ್ಥಾನ
ಪಡೆಯುವಲ್ಲಿ
ಯಶಸ್ವಿಯಾಗಿದ್ದಾರೆ.
ಇಂದು ನಡೆದ ಚುನಾವಣೆಯಲ್ಲಿ
ಅನುಸೂಯಾ ಸೊಮಯ್ಯಾ ಪೂಜಾರ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಕ್ಕೆ ಮಾಜಿ ಸಚಿವರಾದ ವಿನಯ ಕುಲಕರ್ಣಿ ಅವರು ಅಭಿನಂದನೆ ಸಲ್ಲಿಸಿದ್ದಾರೆ.