ಸ್ಥಳೀಯ ಸುದ್ದಿ

ಕೋಟಿ ವೃಕ್ಷ ಅಭಿಯಾನಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಸಂತೋಷ ಲಾಡ್ ಚಾಲನೆ

ಧಾರವಾಡ-

ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಅರಣ್ಯ ಹಾಗೂ ಉನ್ನತ ಶಿಕ್ಷಣ ಇಲಾಖೆ ಸಹಯೋಗದಲ್ಲಿ ಜುಲೈ 01 ರಂದು ಬೆಳಿಗ್ಗೆ 9 ಗಂಟೆಗೆ ಉನ್ನತ ಶಿಕ್ಷಣ ಅಕಾಡೆಮಿ ಸಂಕೀರ್ಣದಲ್ಲಿ ಜಿಲ್ಲಾ ಮಟ್ಟದ ವನಮಹೋತ್ಸವ ಸಪ್ತಾಹ ಹಾಗೂ ಕೋಟಿ ವೃಕ್ಷ ಅಭಿಯಾನದ ಉದ್ಘಾಟನೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಕಾರ್ಮಿಕ ಇಲಾಖೆಯ ಸಚಿವ ಹಾಗೂ ಧಾರವಾಡ ಜಿಲ್ಲಾ ಉಸ್ತುವಾರಿ ಸಚಿವರಾದ ಸಂತೋಷ ಎಸ್.ಲಾಡ್ ಸಸಿ ನೆಡುವುದರ ಮೂಲಕ ಕಾರ್ಯಕ್ರಮ ಉದ್ಘಾಟಿಸಿದ್ರು.

ಶಾಸಕ ಅರವಿಂದ ಬೆಲ್ಲದ ಅರಣ್ಯ ಇಲಾಖೆ ಹಿರಿಯ ಅಧಿಕಾರಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು,ವಿದ್ಯಾರ್ಥಿಗಳು, ಸಾರ್ವಜನಿಕರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

ಬೃಹತ್ ವನಮಹೋತ್ಸವ ಅಭಿಯಾನವನದಲ್ಲಿ ಎಲ್ಲಾ ಸರ್ಕಾರಿ ಇಲಾಖೆಗಳ ಅಧಿಕಾರಿ ಹಾಗೂ ಸಿಬ್ಬಂದಿಗಳು, ಶಾಲಾ ಕಾಲೇಜು ವಿದ್ಯಾರ್ಥಿ, ವಿದ್ಯಾರ್ಥಿನಿಯರು, ಪರಿಸರ ಸಂಘಟನೆಗಳು ಹಾಗೂ ಆಸಕ್ತ ಸರ್ಕಾರೇತರ ಸಂಘ ಸಂಸ್ಥೆಗಳನ್ನು ಸಕ್ರೀಯವಾಗಿ ತೊಡಗಿಸಿಕೊಳ್ಳಬೇಕೆಂದು ಹೇಳಲಾಯಿತು.

ಜುಲೈ 1,2023 ರಿಂದ ಜುಲೈ 7 ರ ಅವಧಿಯಲ್ಲಿ ಅರಣ್ಯ ಪ್ರದೇಶಗಳಲ್ಲಿ ಖಾಲಿ ಇರುವ ಸ್ಥಳಗಳು, ಅರಣ್ಯೇತರ ಸರ್ಕಾರಿ ಸ್ಥಳಗಳು, ರಸ್ತೆ ಬದಿಗಳು, ಶೈಕ್ಷಣಿಕ ಸಂಸ್ಥೆಗಳ ಆವರಣ, ಆಸ್ಪತ್ರೆಗಳ ಆವರಣ, ಕೈಗಾರಿಕಾ ಪ್ರದೇಶಗಳ ಆವರಣ, ಧಾರ್ಮಿಕ ಸಂಘ ಸಂಸ್ಥೆಗಳ ಆವರಣ, ವಿಶ್ವ ವಿದ್ಯಾಲಯಗಳ ಆವರಣ, ಸರ್ಕಾರಿ ಇಲಾಖೆಗಳ ಆವರಣ, ರೈತರ ಜಮೀನುಗಳ ಬದುಗಳ ಮೇಲೆ ಮತ್ತು ಕೆರೆ ಅಂಗಳಗಳು ಇತ್ಯಾದಿ ಪ್ರದೇಶಗಳಲ್ಲಿ ಸ್ಥಳೀಯ ಜಾತಿಯ ಮರಗಿಡಗಳನ್ನು ವ್ಯಾಪಕವಾಗಿ ನೆಡುವುದರ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಯೋಜನೆ ರೂಪಿಸಿ ಎಂದು ಸಚಿವ ಸಂತೋಷ ಲಾಡ ಕರೆ ನೀಡಿದ್ರು.

ಈ ವನಮಹೋತ್ಸವ ಸಪ್ತಾಹದಲ್ಲಿ ಧಾರವಾಡ ಜಿಲ್ಲೆ ಒಟ್ಟು 145 ಗ್ರಾಮ ಪಂಚಾಯತ ವ್ಯಾಪ್ತಿಯ ವಿವಿಧ ಸ್ಥಳಗಳಲ್ಲಿ ಪ್ರಾದೇಶಿಕ ಅರಣ್ಯ ವಿಭಾಗ ಹಾಗೂ ಸಾಮಾಜಿಕ ಅರಣ್ಯ ವಿಭಾಗದ ವತಿಯಿಂದ ಒಟ್ಟು 2.52 ಲಕ್ಷ ಸಸಿಗಳನ್ನು ನೆಡಲು ಕಾರ್ಯಕ್ರಮ ರೂಪಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button