ಸ್ಥಳೀಯ ಸುದ್ದಿ
ಕೋವಿಡ್ ಓರ್ವ ವ್ಯಕ್ತಿ ಸಾವು
ಧಾರವಾಡ
ಕೋವಿಡ್ ಸೋಂಕಿನಿಂದ ಹುಬ್ಬಳ್ಳಿಯ ಗಾಂಧಿನಗರದ 77 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆ.
ಮಧುಮೇಹ,ಅಧಿಕ ರಕ್ತದೊತ್ತಡ ಹಾಗೂ ಹೃದಯ ಸಂಬಂಧಿ ಸಮಸ್ಯೆಗಳಿಂದಲೂ ಕೂಡ ಅವರು ಬಳಲುತ್ತಿದ್ದರು.ಜುಲೈ 20 ರಂದು ಕೋವಿಡ್ ಸೋಂಕು ದೃಢಪಟ್ಟು ಚಿಕಿತ್ಸೆಗಾಗಿ ಸುಚಿರಾಯು ಆಸ್ಪತ್ರೆಗೆ ದಾಖಲಾಗಿದ್ದರು. ಜುಲೈ 24 ರಂದು ಮೃತಪಟ್ಟಿದ್ದಾರೆ.
ಜಿಲ್ಲೆಯಲ್ಲಿ ವಾರಕ್ಕೆ 3 ದಿನಗಳ ಕಾಲ 100 ಟೀಮ್ ವಾಕ್ಸಿನೇಶನ ಗಾಗಿ ಕೆಲಸ ಮಾಡುತ್ತಿದೆ.
ಜಿಲ್ಲೆಯ ಜನತೆ ಸಾಮಾಜಿಕ ಅಂತರ,ಕೋವಿಡ್ ಸುರಕ್ಷತಾ ಕ್ರಮಗಳನ್ನು ಪಾಲಿಸಿ ಆರೋಗ್ಯ ಕಾಪಾಡಿಕೊಳ್ಳಲು ಎಚ್ಚರಿಕೆ ವಹಿಸಬೇಕು ಎಂದು ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮನವಿ ಮಾಡಿದ್ದಾರೆ.