ಸ್ಥಳೀಯ ಸುದ್ದಿ

ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಭಿಕ್ಷಾಟನೆಗೆ ಕಡಿವಾಣ ಹಾಕುತ್ತಿರುವ ಅಧಿಕಾರಿ

ಧಾರವಾಡ

ಧಾರವಾಡ ಜಿಲ್ಲೆ ವಿದ್ಯಾವಂತರು ಹಾಗೂ ಪ್ರಜ್ಞಾವಂತರು ಇರುವ ಜಿಲ್ಲೆ. ಇಂತಹ ಜಿಲ್ಲೆಯಲ್ಲಿ ಹೆಚ್ಚುತ್ತಿರುವ ಬಾಲ‌ಕಾರ್ಮಿಕ‌ ಪದ್ಧತಿ ಹಾಗೂ ಬಾಲ್ಯವಿವಾಹ ಸೇರಿದಂತೆ ಭಿಕ್ಷಾಟನೆಯನ್ನು ತಡೆಗಟ್ಟಲು ಜಿಲ್ಲಾ ಮಕ್ಕಳ ರಕ್ಷಣಾ ಘಟಕದ ಅಧಿಕಾರಿ ಡಾ. ಕಮಲಾ ಬೈಲೂರು ಮುಂದಾಗಿದ್ದಾರೆ.

ಲಾಕಡೌನ ಸಮಯದಲ್ಲಿ ನೊಂದವರ ಪರವಾಗಿ ನಿಂತಿರುವ ಈ ಅಧಿಕಾರಿ ಜಿಲ್ಲೆಯಲ್ಲಿ ಪ್ರಾಮಾಣಿಕವಾಗಿ ಕರ್ತವ್ಯನಿಷ್ಠೆ ಮೆರೆಯುತ್ತಿದ್ದಾರೆ.

ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಹಾಗೂ ದರ್ಶನ ಮತ್ತು ಸ್ನೇಹಾ ತೆರೆದ ತಂಗುದಾಣದ ಸಹಯೋಗದೊಂದಿಗೆ ಹುಬ್ಬಳ್ಳಿ ಹಾಗೂ ಧಾರವಾಡ ಶಹರದಲ್ಲಿ ಭಿಕ್ಷಾಟನೆಯಲ್ಲಿ ತೊಡಗಿದ ಮಕ್ಕಳ ರಕ್ಷಣಾ ಕಾರ್ಯಾಚರಣೆಯನ್ನು ಮಾಡಿ, ಹುಬ್ಬಳ್ಳಿ ವಿದ್ಯಾನಗರ ಹತ್ತಿರ ಭಿಕ್ಷಾಟನೆಯಲ್ಲಿ ತೊಡಗಿದ್ದ 5 ಜನ ಬಾಲಕಿಯರನ್ನು ರಕ್ಷಿಸಿ ಮಕ್ಕಳ ಕಲ್ಯಾಣ ಸಮಿತಿಯ ಆದೇಶದಂತೆ ಹುಬ್ಬಳ್ಳಿಯ ಸ್ನೇಹಾ ತೆರೆದ ತಂಗುದಾಣದಲ್ಲಿ ತಾತ್ಕಾಲಿಕ ಅಭಿರಕ್ಷಣೆಗಾಗಿ ದಾಖಲಿಸಲಾಯಿತು ಎಂದು ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ಡಾ. ಕಮಲಾ ಬೈಲೂರ ತಿಳಿಸಿದ್ದಾರೆ.

ಈ ಕುರಿತು ಪ್ರಕಟಣೆ ನೀಡಿರುವ ಅವರು, ಬಿಕ್ಷಾಟನೆಯನ್ನೆ ವೃತ್ತಿ ಮಾಡಿಕೊಂಡು ಮಕ್ಕಳನ್ನು ಭಿಕ್ಷಾಟನೆಯಲ್ಲಿ ತೊಡಗಿಸುವುದು ಮಾನವ ಹಕ್ಕುಗಳ ಉಲ್ಲಂಘನೆಯಾಗಿದೆ. ಈ ಸಾಮಾಜಿಕ ಸಮಸ್ಯೆಯನ್ನು ನಿವಾರಿಸಲು ಮಕ್ಕಳ ರಕ್ಷಣಾ ಘಟಕದಿಂದ ಮಾಹಿತಿ, ಶಿಕ್ಷಣ ಮತ್ತು ಸಂವಹನ ಕಾರ್ಯಕ್ರಮಗಳನ್ನು ಅವಳಿ ನಗರದಲ್ಲಿ ನಿರಂತರವಾಗಿ ಆಯೋಜಿಸುವ ಮೂಲಕ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಮತ್ತು ಹುಬ್ಬಳ್ಳಿ ಹಾಗೂ ಧಾರವಾಡದ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಕಾರ್ಯಾಚರಣೆ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ.

ಮಕ್ಕಳ ಭಿಕ್ಷಾಟನೆ ಕಾನೂನು ಬಾಹಿರ. ಮಕ್ಕಳನ್ನು ಭಿಕ್ಷಾಟನೆಗಾಗಿ ಯಾರಾದರೂ ಬಳಸಿಕೊಂಡರೆ ಅಂತಹವರ ವಿರುದ್ಧ ಕಾನೂನಿನಡಿ ಒಂದು ವರ್ಷ ಜೈಲು ಶಿಕ್ಷೆ ಅಥವಾ ದಂಡ ಹಾಗೂ ಎರಡನ್ನೂ ವಿಧಿಸಲಾಗುತ್ತದೆ. ಮಕ್ಕಳ ಹಕ್ಕುಗಳನ್ನು ರಕ್ಷಿಸುವುದು ನಮ್ಮೆಲ್ಲರ ಆದ್ಯ ಕರ್ತವ್ಯವಾಗಿದೆ. ಪ್ರತಿ ಮಗುವಿಗೂ ಶಿಕ್ಷಣ ರಕ್ಷಣೆ ಮತ್ತು ಪೋಷಣೆ ಸಿಗಬೇಕಾದುದು ಅವಶ್ಯಕವಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button