Jannah Theme License is not validated, Go to the theme options page to validate the license, You need a single license for each domain name.
BREAKING NEWSCITY CRIME NEWSHubballiNAVANAGARPolitical news

ವರದಕ್ಷಿಣೆ ಕಿರುಕುಳಕ್ಕೆ ಬಲಿಯಾಯ್ತೆ..ಜೀವ!

Dowry harrashments

POWER CITYNEWS : HUBLIಹುಬ್ಬಳ್ಳಿ: ತವರು ಮನೆಯಿಂದ ವರದಕ್ಷಿಣೆ ತರಲಿಲ್ಲವೆಂಬ ಕಾರಣಕ್ಕೆ ಮಗಳನ್ನು ಕತ್ತು ಹಿಸುಕಿ ಕೊಲೆ ಮಾಡಿದ್ದಾರೆ. ಎಂದು ಆರೋಪಿಸಿ ಯುವತಿ ಪೋಷಕರು ಹಳೇ ಹುಬ್ಬಳ್ಳಿ ಪೋಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.
ಹಳೇಹುಬ್ಬಳ್ಳಿಯ ವಿಶಾಲ ನಗರದ ಹೀನಾ ಕೌಸರ(28) ವರದಕ್ಷಿಣೆ ಕಿರುಕುಳಕ್ಕೆ ಬಲಿಯಾದ ಯುವತಿಯಾಗಿದ್ದಾರೆ ಎನ್ನಲಾಗಿದೆ. ಎರಡು ವರ್ಷದ ಹಿಂದೆ ಮಹಮ್ಮದ್ ಅಜರುದ್ದಿನ್‍ನೊಂದಿಗೆ ಹೀನಾಳನ್ನು ಮದುವೆ ಮಾಡಿ ಕೊಡಲಾಗಿತ್ತು. ಮದುವೆಯ ಹೊಸತರಲ್ಲಿ ಎಲ್ಲವೂ ಚೆನ್ನಾಗಿ ಇತ್ತು. ನಂತರ ವರದಕ್ಷಿಣೆ ತರುವಂತೆ ನಿರಂತರವಾಗಿ ಕಿರುಕುಳ ನೀಡುತ್ತಿದ್ದರು ಎನ್ನಲಾಗಿದೆ.
ಈ ಹಿಂದೆ ಹಲವು ಬಾರಿ ಎರಡೂ ಕುಟುಂಬದ ನಡುವೆ ಹಿರಿಯರು ರಾಜಿ ಸಂಧಾನ ಮಾಡಿದ್ದರು.
ಆದ್ರೂ ವರದಕ್ಷಿಣೆ ಕಿರುಕುಳ ನಿಂತಿರಲಿಲ್ಲ. ನಿನ್ನೆಯೂ ವರದಕ್ಷಿಣೆ ತರುವಂತೆ ಮಗಳೊಂದಿಗೆ ಜಗಳವಾಗಿದೆ. ಈ ಜಗಳ ವಿಕೋಪಕ್ಕೆ ತಿರುಗಿ ನಾಲ್ಕು ಜನ ಸೇರಿ ಕತ್ತು ಹಿಸುಕಿ ಕೊಲೆ ಮಾಡಿದ್ದಾರೆಂದು ಯುವತಿಯ ತಂದೆ ಮೆಹಬೂಬಸಾಬ್ ನವಲೂರ ದೂರು ನೀಡಿದ್ದಾರೆ.ಗಂಡ ಮಹಮ್ಮದ್ ಅಜರುದ್ದಿನ್, ಅತ್ತೆ ಫರಿದಾಬಾನು, ಮಾವ ಕರೀಮ್‍ಸಾಬ್, ಹಾಗೂ ನಾದನಿ ಶಬಾನಾ ವಿರುದ್ಧ ದೂರು ದಾಖಲಾಗಿದೆ. ದೂರು ದಾಖಲಿಸಿಕೊಂಡಿರುವ ಹಳೆ ಹುಬ್ಬಳ್ಳಿ ಪೋಲೀಸ್ ಠಾಣೆ ಪೋಲೀಸರು ತನಿಖೆ ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *