ಡಿಜಿಟಲ್ ಆನಲೈನ್ ಗ್ರಂಥಾಲಯ ಉದ್ಘಾಟನೆ
ಧಾರವಾಡ
ಇಂದು ಧಾರವಾಡದ ಕಿಟಲ್ ಕಲಾ ಮಹಾವಿದ್ಯಾಲಯದಲ್ಲಿ ಆನಲೈನ್ ಡಿಜಿಟಲ್ ಗ್ರಂಥಾಲಯದ ಉದ್ಘಾಟನೆಯನ್ನು ಹುಬ್ಬಳ್ಳಿ – ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರ ಈರೇಶ ಅಂಚಟಗೇರಿ ರವರು ಉದ್ಘಾಟಿಸಿದರು.
ನಂತರ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿ, ನಮ್ಮೆಲ್ಲರ ನೆಚ್ಚಿನ ಪ್ರಧಾನಮಂತ್ರಿಗಳಾದ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ರವರು, ಕೇಂದ್ರ ಸರ್ಕಾರದಿಂದ ಡಿಜಿಟಲ್ ಇಂಡಿಯಾ ಸಲುವಾಗಿ ಅನೇಕ ಯೋಜನೆಗಳನ್ನು ಕೈಗೊಂಡಿದ್ದು, ಇದರ ಸದುಪಯೋಗ ಮಾಡಿಕೊಳ್ಳುವುದು ನಮ್ಮ ನಿಮ್ಮೆಲ್ಲರ ಕರ್ತವ್ಯ. ಹಾಗೂ ಕಿಟಲ್ ಕಾಲೇಜಿನ ಸಿಬ್ಬಂದಿ ವರ್ಗದವರು ವಿದ್ಯಾರ್ಥಿಗಳಿಗೆ ಅನುಕೂಲವಾಗುವ ದೃಷ್ಟಿಯಲ್ಲಿ ಮಾದರಿ ಡಿಜಿಟಲ್ ಗ್ರಂಥಾಲಯ ನಿರ್ಮಿಸಿರುವುದರಿಂದ ಮಹಾವಿದ್ಯಾಲಯದ ಪ್ರಾಂಶುಪಾಲಾರಿಗೆ ಅಭಿನಂದನೆ ಸಲ್ಲಿಸುವೆ ಎಂದರು.
ಹೆಚ್ಚಿನ ವಿದ್ಯಾರ್ಥಿಗಳು ಸಹ ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮನವಿ ಮಾಡಿದ್ರು.
ಈ ಸಂದರ್ಭದಲ್ಲಿ ರಾಜ್ಯಕ್ಕೆ ಮೊದಲ ಸ್ಥಾನ ಪಡೆದ ವಿದ್ಯಾರ್ಥಿ ಶಿವಾನಂದ ಪಾಟೀಲ ಇವರಿಗೆ ಅಭಿನಂದಿಸಿ, ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಪ್ರಾಂಶುಪಾಲರಾದ ಶ್ರೀಮತಿ ರೇಖಾ ಜೋಗುಳ ರವರು, ಶ್ರೀ ಎಸ್.ಬಿ.ನ್ಯಾಮತಿ , ಡಾ ರಾಜೇಶ್ ತುರಮರಿ, ಡಾ ಎಂ. ಎಚ್. ಮುಲ್ಲಾ, ಡಾ ರಾಜು ಜಿ, ಶಿವಾನಂದ ಬುಳ್ಳ, ಮೃತ್ಯುಂಜಯ ಕೋಟೂರ್ ಹಾಗೂ ಇನ್ನಿತರರು ಉಪಸ್ಥಿತರಿದ್ದರು.