DHARWADHubballiLife StylePoliceTWINCITYVINAYKULKARNIಬೆಂಗಳೂರು
ಮಾಜಿ ಸಚಿವ ವಿನಯ್ ಕುಲಕರ್ಣಿ ನಿವಾಸದ ಮೇಲೆ’EDದಾಳಿ…
NEWS TIME

POWER CITY NEWS: BANGALURU:ಬೆಂಗಳೂರು (ಏ.25): ಡಿಸಿ ಎಂ ಸಹೋದರ ಮಾಜಿ ಸಂಸದ ಡಿ.ಕೆ.ಸುರೇಶ್ (D K Suresh) ಹೆಸರು ಬಳಸಿಕೊಂಡು ಕೋಟ್ಯಾಂತರ ರೂಪಾಯಿ ಮೌಲ್ಯದ ಚಿನ್ನದ ವ್ಯವಹಾರ ವಂಚನೆ ಪ್ರಕರಣದಲ್ಲಿ ಬಂಧನವಾಗಿದ್ದ ಐಶ್ವರ್ಯಾ ಗೌಡ (Aishwarya Gowda) ಹಾಗೂ ಕಾಂಗ್ರೆಸ್ ಮಾಜಿ ಸಚಿವ ಹಾಲಿ ಶಾಸಕ ವಿನಯ್ ಕುಲಕರ್ಣಿ (Vinay Kulkarni)”ಶಿವ ನಂದಿ” ನಿವಾಸದ ಮೇಲೆ ಇಡಿ ಅಧಿಕಾರಿಗಳು ರೇಡ್ ಮಾಡುವ ಮೂಲಕ ಬಿಗ್ ಶಾಕ್ ಕೊಟ್ಟಿದ್ದಾರೆ.ಎಕಕಾಲಕ್ಕೆ ಐಶ್ವರ್ಯಾ ಗೌಡ ಹಾಗೂ ಶಾಸಕ ವಿನಯ್ ಕುಲಕರ್ಣಿ ಮನೆ ಹಾಗೂ ಕಚೇರಿಗಳ ಮೇಲೆ ದಾಳಿ ನಡೆಸಿದ್ದ ಅಧಿಕಾರಿಗಳು ರಾತ್ರಿಯಿಡಿ ಪರಿಶೀಲನೆ ನಡೆಸಿದ್ದಾರೆ.
ಇಬ್ಬರ ಮನೆ ಹಾಗೂ ಕಚೇರಿ ಮೇಲೆ ಶೋಧಕಾರ್ಯ ಮುಂದುವರೆಸಿದ್ದಾರೆ.
ಜಾರಿ ನಿರ್ದೇಶನಾಲಯ (ED)ದ ಅಧಿಕಾರಿಗಳು ವಿನಯ್ ಅವರ ಬೆಂಗಳೂರಿನಲ್ಲಿರುವ ಮನೆ ಹಾಗೂ ಐಶ್ವರ್ಯಾ ಅವರ ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ಕಿರುಗಾವಲು ಗ್ರಾಮದಲ್ಲಿರುವ ಮನೆ ಹಾಗೂ ಬೆಂಗಳೂರಿನ ನಿವಾಸದ ಮೇಲೆ ದಾಳಿ ನಡೆಸಿದ್ದು, ಶೋಧ ಕಾರ್ಯ ನಡೆಸಿದ್ದಾರೆ.