ಸ್ಥಳೀಯ ಸುದ್ದಿ

ಧಾರವಾಡದಲ್ಲಿ ಪ್ರಧಾನಿ‌ ಮೋದಿ ಹವಾ

Click to Translate

ಧಾರವಾಡ

ಧಾರವಾಡ ಜಿಲ್ಲೆಯಲ್ಲಿ ಪ್ರಧಾನಿ ಮೋದಿ ಅವರು ಐತಿಹಾಸಿಕ ಕಾರ್ಯಕ್ರಮ ಯಶಸ್ವಿಯಾಗಿದ್ದು, ಪ್ರಧಾನಿ ನೋಡಲು 2 ಲಕ್ಷಕ್ಕಿಂತಲೂ ಅಧಿಕ ಜನಸಾಗರವೇ ಹರಿದು ಬಂದಿತ್ತು. ಸುಮಾರು 5 ಸಾವಿರ ಕೋಟಿ ರೂಪಾಯಿ ಯೋಜನೆಗೆ ಚಾಲನೆ ನೀಡಿದ ಪ್ರಧಾನಿ ಲಂಡನನಲ್ಲಿ ಭಾರತೀಯರಿಗೆ ಆದ ಅವಮಾನವನ್ನು ಖಂಡಿಸಿದ್ರು. ಅಲ್ಲದೇ ಡಂಬಲ್ ಎಂಜಿನ್ ಸರ್ಕಾರದ ಕಾರ್ಯವೈಖರಿ ಕೊಂಡಾಡಿದ್ರು. ಅವಳಿನಗರ ಹಾಗೂ ಕರ್ನಾಟಕದ ಜನರ ಸೇವೆಗೆ ಸದಾ ಸಿದ್ದ ಎಂದಿರುವ ಮೋದಿ ಕನ್ನಡದಲ್ಲೇ ಭಾಷಣ ಶುರು ಮಾಡಿದ್ರು….

ಮೋದಿ ಅವರಿಗೆ ವಿಶೇಷ ಸನ್ಮಾನ ಗೌರವ

ಜಗದ್ಗುರು ಬಸವೇಶ್ವರ ಅವರಿಗೆ ನನ್ನ ನಮಸ್ಕಾರಗಳು. ಕಲೆ, ಸಾಹಿತ್ಯ ಮತ್ತು ಸಂಸ್ಕೃತಿಯ ಈ ನಾಡಿನ ಸಹೋದರ ಸಹೋದರಿಯರಿಗೆ ನನ್ನ ನಮಸ್ಕಾರಗಳು ಎಂದು ಮಾನ್ಯ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಮಾತು ಆರಂಭಿಸಿದರು.

ಧಾರವಾಡ ಜಿಲ್ಲೆಗೆ ಐಐಟಿ ಹಾಗೂ ಇತರೆ 5 ಸಾವಿರ ಕೋಟಿ ವೆಚ್ಚದ ಯೋಜನೆಗಳಿಗೆ ಚಾಲನೆ ಕೊಡಲು ಆಗಮಿಸಿದ್ದ ಮೋದಿ, ಜನರಿಗೆ ಜನಸ್ನೇಹಿ ಪ್ರಧಾನಿ ಹಾಗೂ ಕರ್ನಾಟಕದ ಜೋತೆಗೆ ತಮಗೆ ಇರುವ ಬಾಂಧವ್ಯ ಎಂತಹದ್ದು ಎಂದು ತೋರಿಸಿದ್ರು.
ಹುಬ್ಬಳ್ಳಿ, ಬೆಳಗಾವಿ, ಕಲಬುರ್ಗಿ ಮತ್ತಿತರ ಕಡೆಗಳಲ್ಲಿ ರೋಡ್ ಶೋ ಸಂದರ್ಭದಲ್ಲಿ ನೀಡಿದ ಅದ್ಭುತ ಪ್ರೀತಿ. ಮತ್ತು ಆ ಕ್ಷಣ ಮರೆಯಲಾಗದು‌.
ಜನರು ಪ್ರೀತಿ ಮತ್ತು ಆಶೀರ್ವಾದವು ನನ್ನ ಮೇಲಿನ ದೊಡ್ಡ ಋಣವಾಗಿದೆ‌. ನಿರಂತರ ಸೇವೆಯ ಮೂಲಕ ಕರ್ನಾಟಕ ಜನರ ಈ ಋಣವನ್ನು ತೀರಿಸುತ್ತೇನೆ ಎಂದು ಪ್ರಧಾನಮಂತ್ರಿಗಳು ವಿನಮೃತೆಯಿಂದ ಭರವಸೆಯನ್ನು ನೀಡಿದರು.

ಡಬಲ್ ಎಂಜಿನ್ ಸರಕಾರವು ರಾಜ್ಯದ ಹಳ್ಳಿ ಹಳ್ಳಿಗಳ ಸಮಗ್ರ ಪ್ರಗತಿಗೆ ಬದ್ಧವಾಗಿದೆ. ಪ್ರಗತಿಯ ಹೊಸ ಶಕೆಯು ಇಡಿ ರಾಜ್ಯದ ಪ್ರಗತಿಗೆ ಮುನ್ನುಡಿ ಬರೆಯಲಿದೆ.
ಮಲೆನಾಡು ಮತ್ತು ಬಯಲುಸೀಮೆಯ ನಡುವಿನ ದ್ವಾರಬಾಗಿಲು ಆಗಿರುವ ಈ ಭಾಗವು ಪ್ರತಿಯೊಬ್ಬರನ್ನು ಪ್ರಿತಿಯಿಂದ ಸ್ವಾಗತಿಸಿದೆ.

ಧಾರವಾಡವು ಕರ್ನಾಟಕ ಮತ್ತು ಭಾರತದ ಜೀವಂತಿಕೆಯ ಪ್ರತಿಬಿಂಬವಾಗಿದೆ.ಧಾರವಾಡದ ಪರಿಚಯವು ದ.ರಾ.ಬೇಂದ್ರೆ, ಸಮೃದ್ಧ ಸಂಗೀತ ಭೀಮಸೇನ್ ಜೋಶಿ, ಗಂಗೂಬಾಯಿ ಹಾನಗಲ್, ಕುಮಾರ್ ಗಂಧರ್ವ,ಬಸವರಾಜ ರಾಜಗುರು, ಮಲ್ಲಿಕಾರ್ಜುನ ಮನಸೂರ ಅವರಂತಹ ಸಂಗೀತ ದಿಗ್ಗಜರ ತವರೂರಾಗಿದೆ.
ಧಾರವಾಡ ಪೇಢೆಯ ಸ್ವಾದವು ಮರೆಯಲಾರದಂತದು.

ಐಐಟಿಯ ಹೊಸ ಕ್ಯಾಂಪಸ್ ಧಾರವಾಡದ ಪರಿಚಯವನ್ನು ಮತ್ತಷ್ಟು ಬಲಗೊಳಿಸಲಿದೆ. ಕರ್ನಾಟಕದ ವಿಕಾಸದಲ್ಲಿ ಐಐಟಿ ಹೊಸ ಅಧ್ಯಯವಾಗಲಿದೆ. ಇಲ್ಲಿನ ಮೂಲ ಸೌಕರ್ಯಗಳು ಈ ಸಂಸ್ಥೆಯನ್ನು ವಿಶ್ವದ ಮುನ್ನೆಲೆಗೆ ತರಲಿದೆ.

ಬಸವಣ್ಣನವರು ಅನುಭವ ಮಂಟಪ ಸ್ಥಾಪನೆ ಮೂಲಕ ಪ್ರಜಾಪ್ರಭುತ್ವ ವ್ಯವಸ್ಥೆಗೆ ಮುನ್ನುಡಿ ಬರೆದಿದ್ದಾರೆ. ಲಂಡನ್ ನಲ್ಲಿ ಬಸವೇಶ್ವರ ಪುತ್ಥಳಿ ಲೋಕಾರ್ಪಣೆ ಅವಕಾಶ ಸಿಕ್ಕಿತ್ತು.
ಆದರೆ ಅದೇ ಲಂಡನ್‌ ನಲ್ಲಿ ಇತ್ತೀಚೆಗೆ ಭಾರತದ ಪ್ರಜಾಪ್ರಭುತ್ವ ಕ್ಕೆ ಅವಮಾನಿಸುವ ಮಾತುಗಳನ್ನು ಕೇಳುವುದು ದೌರ್ಭಾಗ್ಯವಾಗಿದೆ ಎಂದು ಹೇಳಿದರು.
ಇಂತಹ ಮಾತುಗಳು ಭಾರತದ ಪರಂಪರೆಗೆ ಮಾತ್ರವಲ್ಲ; ಇಡೀ ಭಾರತೀಯರಿಗೆ ಅವಮಾನಿಸಿದಂತಾಗಿದೆ.

ಕರ್ನಾಟಕವು ಹೈಟೆಕ್ ಇಂಡಿಯಾದ ಎಂಜಿನ್ ಆಗಿದೆ ಎಂದು ಬಣ್ಣಿಸಿದ ಅವರು, ಡಬಲ್ ಎಂಜಿನ್ ಸರಕಾರಕ್ಕೆ ಇಲ್ಲಿನ ಜನರ ಆಶೀರ್ವಾದ ಬಲ ತುಂಬಲಿದೆ ಎಂದು ಪ್ರಧಾನಿ ಹೇಳಿದರು.

ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮಾತನಾಡಿ, ಡಬಲ್ ಎಂಜಿನ ಸರ್ಕಾರ ಧಮ್ ಹಾಗೂ ತಾಕತ್ ನಿಂದ ಅಭಿವೃದ್ಧಿ ಕೆಲಸಗಳನ್ನು ಮಾಡುತ್ತಿದೆ. ರಾಜಕಾರಣಿಗಳ ಕಣ್ಣು ಮುಂದಿನ ಚುನಾವಣೆಗಳ ಮೇಲಿದ್ದರೆ,ಮುತ್ಸದ್ಧಿಯ ಕಣ್ಣು ಮುಂದಿನ ಪೀಳಿಗೆಯ ಭವಿಷ್ಯದ ಮೇಲಿರುತ್ತದೆ. ಪ್ರಧಾನಿ ನರೇಂದ್ರ ಮೋದಿ ಅವರು ಅಂತಹ ಮುತ್ಸದ್ಧಿತನ ಹೊಂದಿರುವ ನೇತಾರ ತಾಂತ್ರಿಕವಾಗಿ ದೇಶವನ್ನು ಸಶಕ್ತಗೊಳಿಸಲು ಧಾರವಾಡ ಐಐಟಿ ಸ್ಥಾಪಿಸಿದ್ದಾರೆ ಎಂದರು.


ಇದೇ ಸಂದರ್ಭದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮಾತನಾಡಿ, ಘೋಷಣೆಗೆ ಸೀಮಿತವಾಗಿದ್ದ ಬಡತನ ನಿವಾರಣೆ ಕಾರ್ಯಕ್ರಮಗಳನ್ನು ಸಮರ್ಪಕವಾಗಿ ಅನುಷ್ಠಾನ ಮಾಡಿ, ಮಹಿಳೆಯರು, ಮಕ್ಕಳನ್ನು ಸಶಕ್ತಗೊಳಿಸಿ,ಜಗತ್ತಿಗೆ ಭಾರತವನ್ನು ಹಿರಿಯಣ್ಣನಾಗಿ ರೂಪಿಸುತ್ತಿರುವ ಶ್ರೇಯಸ್ಸು ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಸಲ್ಲುತ್ತದೆ.ದೇಶವನ್ನು ಭ್ರಷ್ಟಾಚಾರ ಮುಕ್ತಗೊಳಿಸಲು ಹೊಸ ಯೋಜನೆಗಳನ್ನು ಪ್ರಧಾನಿಯವರು ದೇಶಕ್ಕೆ ನೀಡಿದ್ದಾರೆ.ಧಾರವಾಡಕ್ಕೆ ಪ್ರತಿಷ್ಠಿತ ಐಐಟಿ ಬರಲು ಅವರು ಕಾರಣರಾಗಿದ್ದಾರೆ.2019 ರಲ್ಲಿ ಈ ಕಟ್ಟಡದ ಶಂಕುಸ್ಥಾಪನೆ ನೆರವೇರಿಸಿದ್ದ ಪ್ರಧಾನಿಯವರೇ ಈ ಕಟ್ಟಡ ಉದ್ಘಾಟಿಸುತ್ತಿರುವುದು ಸಂತಸದ ಸಂಗತಿಯಾಗಿದೆ ಎಂದರು.

ಪ್ರಧಾನಿ‌ಮೋದಿ ಅವರಿಗೆ ವಿಶೇಷ ಸನ್ಮಾನ
ಹಾವೇರಿಯ ಏಲಕ್ಕಿ ಹಾರ,ಮುತ್ತಿನಿಂದ ಅಲಂಕರಿಸಿದ ಪೇಟ ,ಶಾಲು ಹೊದಿಸಿ,ಶ್ರೀ ಸಿದ್ಧಾರೂಢರ ವಿಗ್ರಹ,ಕಲಘಟಗಿಯ ಆಕರ್ಷಕ ತೊಟ್ಟಿಲು ಹಾಗೂ ಧಾರವಾಡ ಪೇಡ ನೀಡಿ ಪ್ರಧಾನಿ ನರೇಂದ್ರ ಮೋದಿಯವರನ್ನು ಸತ್ಕರಿಸಲಾಯಿತು.

ಇದೇ ಸಂದರ್ಭದಲ್ಲಿ ಮೋದಿ ಅವರಿಗೆ ಭದ್ರತೆ ದೃಷ್ಟಿಯಿಂದ ದೂರದಿಂದಲೇ ರೈತ ಮಹಿಳೆಯೊಬ್ಬರು ಮನೆಯಿಂದ‌ಆರತಿ‌ ತಂದು ಆರತಿ ಎತ್ತಿದ ದೃಶ್ಯವೂ ನಡೆಯಿತು.

ಕಾರ್ಯಕ್ರಮ ಮುಗಿಸಿ ಪ್ರಧಾನಿ ಮೋದಿ‌ ಅವರು ಹುಬ್ಬಳ್ಳಿಯಿಂದ‌ವಿಶೇಷ ವಿಮಾನದ ಮೂಲಕ ದೆಹಲಿಗೆ ತೆರಳಿದ್ರು. ಈ ಐತಿಹಾಸಿಕ ಕಾರ್ಯಕ್ರಮದಲ್ಲಿ 2 ಲಕ್ಷಕ್ಕೂ ಅಧಿಕ ಜನರು ಕಾರ್ಯಕ್ರಮಕ್ಕೆ ಸಾಕ್ಷಿಯಾದ್ರು .

ಈ‌ ಸಂದರ್ಭದಲ್ಲಿ.‌ ವಿಧಾನಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಸಚಿವರಾದ ಗೋವಿಂದ ಕಾರಜೋಳ,ಸಿ.ಸಿ.ಪಾಟೀಲ, ವಿ.ಸೋಮಣ್ಣ,ಬಿ.ಎ.ಬಸವರಾಜ, ಶಂಕರ ಪಾಟೀಲ ಮುನೇನಕೊಪ್ಪ,ಮಾಜಿಮುಖ್ಯಮಂತ್ರಿ-ಶಾಸಕ ಜಗದೀಶ್ ಶೆಟ್ಟರ್, ಶಾಸಕರಾದ ಸಿ.ಎಂ.ನಿಂಬಣ್ಣವರ,ಅರವಿಂದ ಬೆಲ್ಲದ,ಅಮೃತ ದೇಸಾಯಿ,ವಿಧಾನಪರಿಷತ್ ಸದಸ್ಯರಾದ ಪ್ರದೀಪ ಶೆಟ್ಟರ್,ಎಸ್.ವಿ.ಸಂಕನೂರ,ಮಹಾನಗರಪಾಲಿಕೆ ಮೇಯರ್ ಈರೇಶ್ ಅಂಚಟಗೇರಿ ವೇದಿಕೆಯಲ್ಲಿ ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button