ಧಾರವಾಡ

ಧಾರವಾಡದಲ್ಲಿ ಯಶಸ್ವಿಯಾದ ಅಖಂಡ ಹಿಂದೂ ಬೃಹತ್ ಸಮಾವೇಶ

ಧಾರವಾಡ

ಭಜರಂಗದಳದ ಹಿಂದೂ ಕಾರ್ಯಕರ್ತ ದಿ. ಹರ್ಷ ಅವರ ಹತ್ಯೆಯನ್ನು ಖಂಡಿಸಿ ಇಂದು ಧಾರವಾಡದಲ್ಲಿ ಹಿಂದೂಪರ ಸಂಘಟನೆಗಳ ನೇತೃತ್ವದಲ್ಲಿ, ಅಖಂಡ ಹಿಂದೂ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿತ್ತು.

ನಗರದ ಕಲಾಭವನದ ಮೈದಾನದಲ್ಲಿ ಈ ಸಮಾವೇಶ ನಡೆಯಿತು.‌

ಈ ಸಂದರ್ಭದಲ್ಲಿ ಹರ್ಷ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮೌನಾಚರಣೆಯ ಮೂಲಕ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಸಮಾವೇಶ ಉದ್ಘಾಟನೆ ಮಾಡಿದ್ರು.

ಕಾರ್ಯಕ್ರಮದಲ್ಲಿ ಶಾಸಕ ಶ್ರೀ ಅಮೃತ್ ದೇಸಾಯಿ, ಶ್ರೀ ಪರಮಾತ್ಮನಂದ ಸ್ವಾಮೀಜಿ, ಶ್ರೀ ಬಸವರಾಜ್ ಕುಂದಗೋಳಮಠ, ಶ್ರೀ ಸಂಜಯ ಕಪಟಕರ, ಶ್ರೀ ಈರೇಶ ಅಂಚಟಗೇರಿ, ಮಾಜಿ ಶಾಸಕಿ ಶ್ರೀಮತಿ ಸೀಮಾ ಮಸೂತಿ ಸೇರಿದಂತೆ ಪಕ್ಷದ ಮುಖಂಡರು, ಕಾರ್ಯಕರ್ತರು ಮತ್ತು ಹಿಂದೂ ಅಭಿಮಾನಿಗಳು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button