ಸ್ಥಳೀಯ ಸುದ್ದಿ
ಧಾರವಾಡ ಬೈಪಾಸ್ ರಸ್ತೆಯಲ್ಲಿ ಲಾರಿ-ಕಾರಿನ ನಡುವೆ ಭೀಕರ ಅಪಘಾತ: ಮೂವರ ಸಾವು

ಹುಬ್ಬಳ್ಳಿ: ಧಾರವಾಡದ ಬೈಪಾಸ್ ರಸ್ತೆಯಲ್ಲಿ ಲಾರಿ ಮತ್ತು ಕಾರಿನ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ಮೂವರು ದುರಂತ ಸಾವಿಗೀಡಾಗಿದ್ದಾರೆ. ಇಂದು ಬೆಳಗಿನ ಜಾವ ರಾಷ್ಟ್ರೀಯ ಹೆದ್ದಾರೆ 4ರ ಹಳಿಯಾಳ ಸೇತುವೆ ಬಳಿ ನಡೆದಿದೆ. ಮೃತರನ್ನು ಬಿಂದುಗೌಡ (35) ಹಾಗೂ ಬಾಪುಗೌಡ (36) ಎಂದು ಗುರುತಿಸಲಾಗಿದೆ. ಇನ್ನೋರ್ವನ ಮಾಹಿತಿ ತಿಳಿದುಬಂದಿಲ್ಲ.
ಸ್ಥಳದಲ್ಲಿಯೇ ಇಬ್ಬರು ಮೃತಪಟ್ಟರೆ, ಇನ್ನೋರ್ವ ವ್ಯಕ್ತಿ ಜಿಲ್ಲಾಸ್ಪತ್ರೆಯಲ್ಲಿ ಕೊನೆಯುಸಿರೆಳೆದನು. ಕಾರು ಹುಬ್ಬಳ್ಳಿಯಿಂದ ಬೆಳಗಾವಿ ಕಡೆಗೆ ಹೋಗುತ್ತಿದ್ದಾಗ ಲಾರಿಗೆ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದವರು ಹಾಸನ, ಮೈಸೂರು ಮೂಲದ ವ್ಯಕ್ತಿಗಳು ಎಂದು ತಿಳಿದುಬಂದಿದೆ.ಘಟನಾ ಸ್ಥಳಕ್ಕೆ ಧಾರವಾಡ ಗ್ರಾಮೀಣ ಠಾಣಾ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡಿದ್ದಾರೆ.