ಸ್ಥಳೀಯ ಸುದ್ದಿ

ಪೌರ ಕಾರ್ಮಿಕರ ಮಕ್ಕಳಿಗೆ ಗೌರವ ಸಲ್ಲಿಕೆ

ಧಾರವಾಡ

ಕರ್ನಾಟಕ ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗ ಬೆಂಗಳೂರು, ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ, ಸಂಯುಕ್ತಾಶ್ರಯದಲ್ಲಿ ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಶ್ರೀ ಈರೇಶ ಅಂಚಟಗೇರಿ ರವರ ನೇತೃತ್ವದಲ್ಲಿ ಏರ್ಪಡಿಸಲಾಗಿದ್ದ, 2000 ಕ್ಕೂ ಹೆಚ್ಚಿನ ಪೌರ ಕಾರ್ಮಿಕರನ್ನು ಒಂದೆಡೆ ಸೇರಿಸುವ ಮೂಲಕ ಅವರ ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ಎಂ.ಎಸ್. ಕಾಯ್ದೆ 2013 ರಂತೆ ಸಫಾಯಿ ಕರ್ಮಚಾರಿಗಳಿಗೆ ಅರಿವು ಮೂಡಿಸುವ ಕಾರ್ಯಾಗಾರ ಹಾಗೂ ಸವಲತ್ತು ವಿತರಣಾ ಕಾರ್ಯಕ್ರಮವನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರು ಸಸಿಗೆ ನೀರುಣಿಸುವ ಮೂಲಕ ಉದ್ಘಾಟಿಸಿದರು.

ಇದೇ ಸಂದರ್ಭದಲ್ಲಿ ಪೌರ ಕಾರ್ಮಿಕ ಫಲಾನುಭವಿಗಳಿಗೆ ದ್ವಿಚಕ್ರ ವಾಹನ ಹಾಗೂ ಕಾರುಗಳನ್ನು ಮತ್ತು ಪೌರ ಕಾರ್ಮಿಕರ ವಿದ್ಯಾವಂತ ಮಕ್ಕಳನ್ನು ಒಂದೆಡೆ ಸೇರಿಸಿ ಅವರನ್ನು ಅಭಿನಂದಿಸಿ, ಸನ್ಮಾನಿಸಿ, ಪ್ರಶಸ್ತಿಗಳನ್ನು ವಿತರಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಮಹಾಪೌರರು ಇಡೀ ದೇಶ ಸ್ವಚ್ಛವಾಗಿದೆ ಎಂದರೆ ಅದಕ್ಕೆ ಕಾರಣೀಭೂತರು ಪೌರ ಕಾರ್ಮಿಕರು. ಅವರ ಸತತ ಶ್ರಮದಿಂದ ದೇಶವು ಆರೋಗ್ಯಮಯವಾಗಿದೆ. ಅವರ ಸರ್ವಾಂಗೀಣ ಅಭಿವೃದ್ಧಿಗಾಗಿ ದೇಶದಲ್ಲಿ ಸನ್ಮಾನ್ಯ ಶ್ರೀ ನರೇಂದ್ರ ಮೋದಿ ರವರ ನೇತೃತ್ವದ ಸರ್ಕಾರ ಹಾಗೂ ರಾಜ್ಯದಲ್ಲಿ ಸನ್ಮಾನ್ಯ ಶ್ರೀ ಬಸವರಾಜ ಬೊಮ್ಮಾಯಿ ರವರ ನೇತೃತ್ವದ ಸರ್ಕಾರ ಶ್ರಮಿಸುತ್ತಿದೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಶಾಸಕರಾದ ಶ್ರೀ ಅರವಿಂದ ಬೆಲ್ಲದ ರವರು, ಶ್ರೀ ಅಬ್ಬಯ್ಯ ಪ್ರಸಾದ ರವರು, ಪಾಲಿಕೆಯ ಸದಸ್ಯರಾದ ಶ್ರೀ ಸುರೇಶ ಬೆದರೆ ರವರು, ಶ್ರೀಮತಿ ಕವಿತಾ ಕಬ್ಬೆರ ರವರು, ಜಿಲ್ಲಾಧಿಕಾರಿಗಳಾದ ಶ್ರೀ ಗುರುದತ್ತ ಹೆಗಡೆ ರವರು, ಪಾಲಿಕೆಯ ಆಯುಕ್ತರಾದ ಶ್ರೀ ಗೋಪಾಲಕೃಷ್ಣ ರವರು, ಪಾಲಿಕೆಯ ಅಧಿಕಾರಿಗಳು, ಜಿಲ್ಲಾ ಪಂಚಾಯತ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಾದ ಶ್ರೀ ಸುರೇಶ ಇಟ್ನಾಳ್ ರವರು, ಅವಳಿನಗರದ ಪೌರ ಕಾರ್ಮಿಕರು, ಹಾಗೂ ಪ್ರಮುಖರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *