Jannah Theme License is not validated, Go to the theme options page to validate the license, You need a single license for each domain name.
ರಾಜ್ಯವ್ಯಾಪಾರಹುಬ್ಬಳ್ಳಿ

ಬಿಟ್ ಕ್ವಾಯಿನ್ ದಂಧೆ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ-ಸಿಎಂ ಬಸವರಾಜ್ ಬೊಮ್ಮಾಯಿ…

ಬಿಟ್ ಕ್ವಾಯಿನ್ ದಂಧೆಯ ಕುರಿತು ಸಮಗ್ರ ತನಿಖೆ ನಡೆಯುತ್ತಿದೆ. ಯಾರನ್ನು
ರಕ್ಷಿಸುವ ಪ್ರಶ್ನೆಯೇ ಇಲ್ಲ ಎಂದು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ‌ ಹೇಳಿದರು. ನಗರದಲ್ಲಿಂದು ಮಾತನಾಡಿದ ಅವರು,ಬಿಟ್ ಕ್ವಾಯಿನ್ ದಂಧೆಯಲ್ಲಿ ಪ್ರಮುಖ ನಾಯಕರ ಭಾಗಿಯಾಗಿದ್ದಾರೆ ಎಂಬ ಸಿದ್ದರಾಮಯ್ಯ ಟ್ವಿಟ್ ಮಾಡಿದ್ದರು. ಇದಕ್ಕೆ ಸಿಎಂ ಬಸವರಾಜ್ ಬೊಮ್ಮಾಯಿ ಪ್ರತಿಕ್ರಿಯಿಸಿ ರಾಜ್ಯ ಸರ್ಕಾರ ಬಿಟ್ ಕ್ವಾಯಿನ ಮತ್ರು ಡ್ರಗ್ಸ್ ಬಗ್ಗೆ ಸಮಗ್ರ ತನಿಖೆ ನಡೆಸಿದೆ. ಇದಾದ ಬಳಿಕ ನಾವೇ ಇಡಿಗೆ ಹಾಗೂ ಸಿಬಿಐ ಗೆ ವಹಿಸಿದ್ದೇವೆ. ಈ ವಿಚಾರದಲ್ಲಿ ಯಾರನ್ನ ರಕ್ಷಣೆ ಮಾಡುವ ಪ್ರಶ್ನೆಯೇ ಇಲ್ಲ, ಈ ಬಗ್ಗೆ ಸಮಗ್ರ ತನಿಖೆಗೆ ಸೂಚಿಸಲಾಗಿದೆ ಎಂದರು.

ಬೆಳಗಾವಿಯಲ್ಲಿ ಕನ್ನಡ ಕನ್ನಡ ರಾಜ್ಯೋತ್ಸವ ಆಚರಣೆ ಬಗ್ಗೆ ನಾಳೆ ಸಭೆ ಕರೆಯಲಾಗಿದ್ದು, ಸಭೆಯಲ್ಲಿ ನಿರ್ಧಾರ ತಗೆದುಕೊಳ್ಳಲಾಗುವದು. ಗೀತ ಗಾಯನ ಕಾರ್ಯಕ್ರಮ ಯಶಸ್ವಿಯಾಗಿ ನಡೆಯುತ್ತಿದೆ. ಇಂತ ಕಾರ್ಯಕ್ರಮಗಳು ಇನ್ನು ಹೆಚ್ಚು ಹೆಚ್ಚು ನಡೆಸುವಂತೆ ಕನ್ನಡ ಹಾಗೂ ಸಂಸ್ಕೃತಿ ಇಲಾಖೆಗೆ ಸೂಚನೆ ನೀಡಿದ್ದೇನೆ ಎಂದರು.

ಚುನಾವಣಾ ಬಹಿರಂಗ ಪ್ರಚಾರ ಮುಗಿದಿರುವದರಿಂದ ಹೆಚ್ಚಿಗೆ ಮಾತನಾಡಲಾರೆ, ಎರಡು ಕ್ಷೇತ್ರಗಳಲ್ಲಿ ನಮ್ಮ ಅಭ್ಯರ್ಥಿಗಳು ಜಯ ಸಾಧಿಸಲಿದ್ದಾರೆ ಎಂಬ ವಿಶ್ವಾಸ ವ್ಯಕ್ತಪಡಿಸಿದರು.

Related Articles

Leave a Reply

Your email address will not be published. Required fields are marked *