ಧಾರವಾಡರಾಜ್ಯ

ಮಕ್ಕಳ ಮುಗ್ದತೆಗೆ ಮನಸೋತ ಜಿಲ್ಲಾಧಿಕಾರಿ ಸರಳತೆ ಎಲ್ಲರಿಗೂ ಮಾದರಿ

Click to Translate

ರಾಜೀವಗಾಂಧಿ ನಗರದ ಅಂಗನವಾಡಿ ಕೇಂದ್ರದಲ್ಲಿ ಇಂದು ಬೆಳಿಗ್ಗೆ ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಪುಷ್ಪ ನೀಡುವ ಮೂಲಕ ಅಂಗನವಾಡಿ ಕೇಂದ್ರಕ್ಕೆ ಮಕ್ಕಳನ್ನು ಸ್ವಾಗತಿಸಿದರು.

ಅಂಗನವಾಡಿ ಕೇಂದ್ರದ ಸಿಬ್ಬಂದಿ ಮಕ್ಕಳಿಗೆ ಆರತಿ ಬೆಳಗಿ ಬರಮಾಡಿಕೊಂಡರು.

ನಂತರ ಜಿಲ್ಲಾಧಿಕಾರಿಗಳು ಮಕ್ಕಳ ಪೋಷಕರು, ಬಾಲವಿಕಾಸ ಸಮಿತಿ ಅಧ್ಯಕ್ಷರು, ಸದಸ್ಯರು ಮತ್ತು ಪಾಲಿಕೆ ಸದಸ್ಯರೊಂದಿಗೆ ಮಕ್ಕಳಿಗೆ ನೀಡುವ ಆಹಾರ ಪೊಟ್ಟಣ, ಅಂಗನವಾಡಿ ಕೇಂದ್ರದ ಸೌಲಭ್ಯಗಳು ಹಾಗೂ ಮಕ್ಕಳ ಕಲಿಕೆಯ ಕುರಿತು ಮಾಹಿತಿ ಪಡೆದರು. ಮತ್ತು ಗರ್ಭಿಣಿ ಮಹಿಳೆಯರಿಗೆ ಪೌಷ್ಠಿಕ ಆಹಾರ ಪೂರೈಕೆ ಕುರಿತು ಗರ್ಭಿಣಿ ಮಹಿಳೆಯರಿಂದ ಮಾಹಿತಿ ಪಡೆದರು.

ಅಂಗನವಾಡಿ ಕೇಂದ್ರದಲ್ಲಿ ಮಕ್ಕಳೊಂದಿಗೆ ಕುಳಿತು ಜಿಲ್ಲಾಧಿಕಾರಿಗಳು ಅವರ ಕಲಿಕೆ ಆಲಿಸಿದರು.

ಈ ಸಂದರ್ಭದಲ್ಲಿ ಪಾಲಿಕೆ ಸದಸ್ಯೆ ಲಕ್ಷ್ಮಿ ಹಿಂಡಸಗೇರಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪ ನಿರ್ದೇಶಕಿ ಡಾ.ಎಚ್.ಎಚ್.ಕುಕನೂರ, ತಾಲೂಕಾ ಶಿಶು ಅಭಿವೃದ್ಧಿ ಅಧಿಕಾರಿ ಡಾ.ಕಮಲಾ ಬೈಲೂರ, ಬಾಲವಿಕಾಸ ಸಮಿತಿ ಅಧ್ಯಕ್ಷೆ ಸಾಹಿರಾಬಾನು, ಅಂಗನವಾಡಿ ಕಾರ್ಯಕರ್ತೆ ಸುವರ್ಣಾ ಪಾಣಿಗಟ್ಟಿ ಸೇರಿದಂತೆ ಇತರರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *

Back to top button