ಜಿಲ್ಲಾಧಿಕಾರಿ ನಿತೇಶ ಪಾಟೀಲ ಅವರು ಇಂದು ಮಧ್ಯಾಹ್ನ ಧಾರವಾಡ ಕೃಷಿ ಉತ್ಪನ್ನ ಮಾರುಕಟ್ಟೆ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನೆಯಲ್ಲಿ ಅಂಗನವಾಡಿ ಕೇಂದ್ರದ ಮಕ್ಕಳಿಗೆ ಹಾಗೂ ಗರ್ಭಿಣಿ, ಬಾನಂತಿಯರಿಗೆ ವಿತರಿಸುವ ಆಹಾರ ಸಾಮಗ್ರಿ ದಾಸ್ತಾನು ಕೇಂದ್ರಕ್ಕೆ ಅನಿರೀಕ್ಷಿತ ಭೇಟಿ ನೀಡಿ ಪರಿಶೀಲಿಸಿದರು. ಪ್ರತಿ ಆಹಾರ ಸಾಮಗ್ರಿಗಳ ಸ್ಯಾಂಪಲ್ ಗಳನ್ನು ಸ್ವತಃ ತೂಕ ಮಾಡಿ, ಸರಿಯಾದ ಪ್ರಮಾಣದಲ್ಲಿ ಆಹಾರ ಸಾಮಗ್ರಿಗಳು ಪ್ಯಾಕ್ ಆಗಿರುವ ಕುರಿತು ಖಾತರಿಪಡಿಸಿಕೊಂಡರು.
ಅಧಿಕಾರಿಗಳಿಗೆ ಆಹಾರ ಸಾಮಗ್ರಿಗಳ ಪ್ರಮಾಣ, ವಿತರಣೆ ಪ್ರಮಾಣ, ಆಹಾರ ಸಾಮಗ್ರಿಗಳ ಕುರಿತು ಸಾರ್ವಜನಿಕರಿಗೆ ಮಾಹಿತಿ ಹಾಗೂ ಜನಜಾಗೃತಿ ಮೂಡಿಸುವ ಕುರಿತು ನಿರ್ದೇಶನಗಳನ್ನು ನೀಡಿದರು.
ಈ ಸಂದರ್ಭದಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕಿ ಡಾ.ಎಚ್.ಎಚ್.ಕುಕನೂರ, ತಾಲೂಕು ಶಿಶು ಅಭಿವೃದ್ಧಿ ಅಧಿಕಾರಿ ಡಾ. ಕಮಲಾ ಬೈಲೂರ ಉಪಸ್ಥಿತರಿದ್ದರು.