ಮಾಜಿ ಸಚಿವ ವಿನಯ ಕುಲಕರ್ಣಿ ಅವರಿಗೆ ಇಂದು ಜನ್ಮದಿನದ ಸಂಭ್ರಮ .
ಈ ಸಂಭ್ರಮಾಚರಣೆಯನ್ನು ಮಾಜಿ ಸಚಿವ ವಿನಯ ಕುಲಕರ್ಣಿ ಅವರು ಈ ಬಾರಿ ಸರಳವಾಗಿ ಆಚರಣೆ ಮಾಡಿಕೊಳ್ಳುತ್ತಿದ್ದಾರೆ.
ಮಾಜಿ ಸಚಿವರ ಆತ್ಮೀಯರು, ಕೆಪಿಸಿಸಿ ಅಲ್ಪಸಂಖ್ಯಾತರ ವಿಭಾಗದ ರಾಜ್ಯ ಉಪಾಧ್ಯಕ್ಷ ಹಾಗೂ ಧಾರವಾಡ ಜಿಲ್ಲೆಯ ಯುವ ಕಾಂಗ್ರೆಸ್ ಮುಖಂಡರಾದ ಇಮ್ರಾನ್ ಕಳ್ಳಿಮನಿ ಮಾಜಿ ಸಚಿವರಿಗೆ ಶುಭಾಶಯ ತಿಳಿಸಿದ್ದಾರೆ.
ಮಾಜಿ ಸಚಿವರಿಗೆ ಬಂದಿರುವ ಎಲ್ಲಾ ಕಷ್ಟಗಳು ದೂರವಾಗಿ ಶೀಘ್ರವೇ ಧಾರವಾಡ ಜಿಲ್ಲೆಗೆ ಆಗಮಿಸಿ, ಕಾಂಗ್ರೆಸ್ ಕಾರ್ಯಕರ್ತರಲ್ಲಿ ಉತ್ಸಾಹ ತುಂಬಿ ಜನ ಸೇವೆಯಲ್ಲಿ ತೊಡಗಿಸಿಕೊಳ್ಳುವಂತೆ ಆಗಲಿ ಎಂದು ಶುಭಹಾರೈಸಿದ್ದಾರೆ.