BREAKING NEWSCITY CRIME NEWSPAHALGAMPolicePolitical newsSportsTechTWINCITY

ಕಾಶ್ಮೀರದಿಂದ ಬೆಂಗಳೂರಿಗೆ ಬಂದ ಕನ್ನಡಿಗರ ಪಾರ್ಥಿವ ಶರೀರಗಳು!

POWERCITY NEWS

POWER CITY NEWS/BANGALURU;ಬೆಂಗಳೂರು : ಜಮ್ಮು ಕಾಶ್ಮೀರದ ಪ್ರವಾಸಿತಾಣವಾದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ನಡೆಸಿದ ಏಕಾ ಎಕಿ ಗುಂಡಿನ ದಾಳಿಗೆ (terror Attack) ಸ್ಥಳದಲ್ಲೇ ಮೃತಪಟ್ಟ ಹಾವೇರಿ ಹಾಗೂ ಶಿವಮೊಗ್ಗದ (Shivamogga) ನಿವಾಸಿಗಳ ಪಾರ್ಥಿವ ಶರೀರಗಳು (mortal remains) ಇಂದು ಮುಂಜಾನೆ ಬೆಂಗಳೂರು ತಲುಪಿದವು. ಶಿವಮೊಗ್ಗದ ಉದ್ಯಮಿ ಮಧುಸೂದನ್ ರಾವ್ ಮತ್ತು ಹಾವೇರಿ ಮೂಲತಃ ಕಾವೇರಿಯ ಬೆಂಗಳೂರಿನಲ್ಲಿ ವಾಸವಾಗಿದ್ದ ಭರತ್ ಭೂಷಣ್ ಪಾರ್ಥಿವ ಶರೀರ ಬೆಳಗಿನ ಜಾವ ಬೆಂಗಳೂರು ತಲುಪಿವೆ.ಇಂದು ಬೆಳಗಿನ ಜಾವ 3 ಗಂಟೆ ಸುಮಾರಿಗೆ ದೆಹಲಿಯಿಂದ ಇಬ್ಬರು ಕನ್ನಡಿಗರ ಮೃತದೇಹಗಳು ಬೆಂಗಳೂರು ಏರ್​ಪೋರ್ಟ್ ತಲುಪಿದವು.

ಮಂಜುನಾಥ್ ಸಂಬಂಧಿಕರು ಶಿವಮೊಗ್ಗದಿಂದ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲೇ ಎಲ್ಲಾ ಪ್ರಕ್ರಿಯೆ ಮುಗಿಸಿ ಮೃತದೇಹವನ್ನು ಸಂಬಂಧಿಕರಿಗೆ ಹಸ್ತಾಂತರಿಸಲಾಯಿತು. ಬಳಿಕ ಆ್ಯಂಬುಲೆನ್ಸ್ ಮೂಲಕ ಎಸ್ಕಾರ್ಟ್ ಭದ್ರತೆಯಲ್ಲಿ ಮಧುಸೂದನ್ಮೃತದೇಹ ಶಿವಮೊಗ್ಗದತ್ತ ಸಾಗಿದೆ. ಕುಟುಂಬದಲ್ಲಿ ಶೋಕ ಮಡುಗಟ್ಟಿದೆ. ಬೆಂಗಳೂರು, ತುಮಕೂರು, ಚಿತ್ರದುರ್ಗ, ಚನ್ನಗಿರಿ ಮೂಲಕ ಶಿವಮೊಗ್ಗಕ್ಕೆಮಧುಸೂದನ್ ರಾವ್ಮೃತದೇಹ ತಲುಪಲಿದೆ.

ವಿಜಯನಗರ ಗುತ್ಯಪ್ಪ ಕಾಲೋನಿಯಲ್ಲಿರುವ ಮಂಜುನಾಥ್ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಹಿಂದೂ ಕಾರ್ಯಕರ್ತರು ಬೈಕ್ ರ್ಯಾಲಿಗೆ ಮುಂದಾಗಿದ್ದಾರೆ. ತುಂಗಾ ನದಿ ತಟದಲ್ಲಿರುವ ರೋಟರಿ ಚಿತಾಗಾರದಲ್ಲಿ ಬ್ರಾಹ್ಮಣ ಸಂಪ್ರದಾಯದಂತೆ ಮಧುಸೂದನ್ ಅಂತ್ಯಕ್ರಿಯೆ ನೆರವೇರಲಿದೆ. ಇನ್ನು ವರ್ತಕರು ಸ್ವಯಂ ಪ್ರೇರಿತವಾಗಿ ಅಂಗಡಿ ಮುಂಗಟ್ಟು ಸುಂದರನಗರದಲ್ಲಿ ಭರತ್ ಅಂತಿಮ ದರ್ಶನವನ್ನು ಸಂಬಂಧಿಕರು ಪಡೆಯುತ್ತಿದ್ದಾರೆ. ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ. ಅದಕ್ಕೂ ಮುನ್ನ ಮನೆ ಬಳಿ ಬ್ಯಾರಿಕೇಡ್ ಹಾಕಿ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ. ಸಚಿವರು, ಗಣ್ಯರು ಅಂತಿಮ ದರ್ಶನಕ್ಕೆ ಆಗಮಿಸಲಿದ್ದಾರೆ. ಇಂದು ಬೆಳಗ್ಗೆ ಸಿಎಂ ಸಿದ್ದರಾಮಯ್ಯ ಅವರು ಭರತ್ ಭೂಷಣ್ ಅವರ ಅಂತಿಮ ದರ್ಶನ ಪಡೆಯಲಿದ್ದು, ಭರತ್ ನಿವಾಸದ ಸುತ್ತ ಬಿಗಿ ಬಂದೋಬಸ್ತ್ ಕೈಗೊಳ್ಳಲಾಗಿದೆ.

ಭಯೋತ್ಪಾದಕರ ದಾಳಿಯಿಂದ ಜೀವ ಕಳೆದುಕೊಂಡ ಕನ್ನಡಿಗರ ಕುಟುಂಬಕ್ಕೆ ರಾಜ್ಯ ಸರ್ಕಾರ ತಲಾ 10 ಲಕ್ಷ ರೂಪಾಯಿ ಪರಿಹಾರ ಘೋಷಣೆ ಮಾಡಿದೆ.

ಕಾಶ್ಮೀರದ ಪಹಲ್ಗಾಮ್‌ ಕಣಿವೆಯಲ್ಲಿ ಭಯೋತ್ಪಾದಕರ ಗುಂಡಿನ ದಾಳಿಗೀಡಾಗಿ ಮೃತಪಟ್ಟ ಕರ್ನಾಟಕದ ಪ್ರವಾಸಿಗರ ಕುಟುಂಬಗಳಿಗೆ ಸಹಾಯ ಒದಗಿಸಲು ಕರ್ನಾಟಕ ಸರ್ಕಾರ ಕಾರ್ಮಿಕ ಸಚಿವ ಸಂತೋಷ್‌ ಲಾಡ್‌ ಅವರನ್ನು ಕಳುಹಿಸಿದೆ. ಅವರು ಉಗ್ರರ ದಾಳಿಯಲ್ಲಿ ಮೃತರಾದ ಕನ್ನಡಿಗರ ಶವಗಳನ್ನು ತವರಿಗೆ ಕಳುಹಿಸುವ ವ್ಯವಸ್ಥೆ ಮಾಡಿದರು. ಮಾತ್ರವಲ್ಲದೆ ಅಲ್ಲಿ ಕರ್ನಾಟಕದವರಿಗಾಗಿ ಸಹಾಯವಾಣಿಯನ್ನು ತೆರೆದಿರುವುದಾಗಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *