ಸ್ಥಳೀಯ ಸುದ್ದಿ

ಮೈಸೂರಿನಲ್ಲಿ ಹುಬ್ಬಳ್ಳಿ ಧಾರವಾಡ ಪಾಲಿಕೆ ಸದಸ್ಯರು

ಧಾರವಾಡ

ಮೈಸೂರು ನಗರದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಚುನಾಯಿತ ಸದಸ್ಯರುಗಳಿಗೆ ರಾಜ್ಯ ನಗರಾಡಳಿತ ಸಂಸ್ಥೆ ವಿಷಯದಲ್ಲಿ ನೀಡುವ 2 ದಿನಗಳ ತರಬೇತಿ ಕಾರ್ಯಕ್ರಮವನ್ನು ನಗರಾಭಿವೃದ್ಧಿ ಸಂಸ್ಥೆಯ ನಿರ್ದೇಶಕರಾದ ವೆಂಕಟೇಶ ಕಡಗದ ರವರು ಹಾಗೂ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ಉದ್ಘಾಟಿಸಿದರು.

ಈ ತರಬೇತಿ ಶಿಬಿರದಲ್ಲಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ 42 ಕ್ಕೂ ಹೆಚ್ಚಿನ ಸದಸ್ಯರು ಭಾಗವಹಿಸಿದ್ದರು.

ಈ ಸಂದರ್ಭದಲ್ಲಿ ನಗರಾಭಿವೃದ್ಧಿ ಸಂಸ್ಥೆಯ ಉಪ ನಿರ್ದೇಶಕರಾದ ವಿಜಯ ವಿ.ಬಿ. ರವರು , ರವಿ.ಜೆ. ರವರು, ಪಾಲಿಕೆಯ ಉಪಮಹಾಪೌರರಾದ ಉಮಾ ಮುಕುಂದ ರವರು, ಸಭಾನಾಯಕರಾದ ತಿಪ್ಪಣ್ಣ ಮಜ್ಜಿಗಿ ರವರು, ಸ್ಥಾಯಿ ಸಮಿತಿಯ ಅಧ್ಯಕ್ಷರಾದ ವಿಜಯಾನಂದ ಶೆಟ್ಟಿ ರವರು, ಶಿವಾನಂದ ಮೆಣಸಿನಕಾಯಿ ರವರು, ಸುರೇಶ ಬೆದರೆ ರವರು, ಮೈಸೂರು ಮಹಾನಗರ ಪಾಲಿಕೆಯ ಮಾಜಿ ಮಹಾಪೌರರಾದ ಶ್ರೀಕಂಠನ್ ರವರು ಉದ್ಘಾಟನಾ ಸಮಾರಂಭದಲ್ಲಿ ಉಪಸ್ಥಿತರಿದ್ದರು.

2 ದಿನಗಳ ಕಾಲ ನಡೆಯುವ ತರಬೇತಿ ಶಿಬಿರದಲ್ಲಿ ವಿವಿಧ ಹಂತಗಳ ತರಬೇತಿಗಳನ್ನು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಸದಸ್ಯರುಗಳಿಗೆ ನೀಡುವ ವ್ಯವಸ್ಥೆಯನ್ನು ಮಹಾಪೌರರು ಮಾಡಿದರು.

Related Articles

Leave a Reply

Your email address will not be published. Required fields are marked *