ಸ್ಥಳೀಯ ಸುದ್ದಿ

ರಾಷ್ಟ್ರೀಯ ಯುವಜನೋತ್ಸವಕ್ಕೆ ಆಗಮಿಸಿದ ವಿವಿಧ ರಾಜ್ಯದ ವಿದ್ಯಾರ್ಥಿಗಳನ್ನು ಸ್ವಾಗತಿಸಿದ- ಅಮೃತ್ ದೇಸಾಯಿ

ಧಾರವಾಡ

ಸ್ವಾಮಿ ವಿವೇಕಾನಂದರ ಜನ್ಮಜಯಂತಿಯ ಪ್ರಯುಕ್ತ ಜನವರಿ 12 ರಿಂದ 16ರವರೆಗೆ ನಡೆಯುವ “ರಾಷ್ಟ್ರೀಯ ಯುವಜನೋತ್ಸವ” ಕಾರ್ಯಕ್ರಮದ ಉದ್ಘಾಟನೆಗೆ ಸನ್ಮಾನ್ಯ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಅವರು ಆಗಮಿಸುತ್ತಿದ್ದಾರೆ.

ಈ ಹಿನ್ನೆಲೆಯಲ್ಲಿ ಧಾರವಾಡ ಕೃಷಿ ವಿಶ್ವ ವಿದ್ಯಾಲದಲ್ಲಿ ಜರಗುವ ಕಾರ್ಯಕ್ರಮಗಳಿಗೆ ಶಾಸಕ ಶ್ರೀ ಅಮೃತ್ ದೇಸಾಯಿ ಅವರನ್ನು ಗೌರವಾಧ್ಯಕ್ಷರನ್ನಾಗಿ ನೇಮಕ ಮಾಡಿದ್ದು ಇಂದು ಶಾಸಕರು ಕೃಷಿ ವಿಶ್ವ ವಿದ್ಯಾಲಯಕ್ಕೆ ಭೇಟಿನೀಡಿ ಬೇರೆ ಬೇರೆ ರಾಜ್ಯಗಳಿಂದ ಆಗಮಿಸುತ್ತಿರುವ ಯುವ ಜನತೆಗೆ ವಸತಿ, ಊಟ ಹಾಗೂ ಕಾರ್ಯಕ್ರಮದ ವ್ಯವಸ್ಥೆಯ ಕುರಿತು ಅಧಿಕಾರಿಗಳ ಜೊತೆ ಪರಿಶೀಲನೆ ನಡೆಸಿದರು ಮತ್ತು ಈಗಾಗಲೇ ಜಮ್ಮು ಕಾಶ್ಮೀರ ರಾಜ್ಯದಿಂದ ಆಗಮಿಸಿದ ವಿದ್ಯಾರ್ಥಿಗಳನ್ನು ಧಾರವಾಡಕ್ಕೆ ಆತ್ಮೀಯವಾಗಿ ಸ್ವಾಗತಿಸಿದರು.

ಐದು ದಿನಗಳ ಕಾಲ ನಡೆಯುವ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ದೇಶದ ವಿವಿಧ ರಾಜ್ಯಗಳಿಂದ ಸಾವಿರಾರು ಯುವಕರು, ಪ್ರೇಕ್ಷಕರು ಜಿಲ್ಲೆಗೆ ಆಗಮಿಸುತ್ತಿದ್ದು, ಸಕಲ ಸಿದ್ಧತೆಯ ಕುರಿತು ಮಾಹಿತಿ ಪಡೆದು ಎಲ್ಲಾ ವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.

Related Articles

Leave a Reply

Your email address will not be published. Required fields are marked *

Back to top button