ಧಾರವಾಡ

ವಿದ್ಯಾಕಾಶಿಯಲ್ಲಿ ಗ್ರಂಥ ಬಿಡುಗಡೆ ಮಾಡಿದ ಸಿಎಂ…..

ಧಾರವಾಡ….

ಕರ್ನಾಟಕ ವಿದ್ಯಾವರ್ಧಕ ಸಂಘದಲ್ಲಿ ಇಂದು ಆಯೋಜಿಸಿದ್ದ ಶ್ರೀ ಚನ್ನವೀರಗೌಡ ಅಣ್ಣಾ ಪಾಟೀಲ ಟ್ರಸ್ಟ್, ಸಂಸ್ಮರಣೆ ದತ್ತಿ ಕಾರ್ಯಕ್ರಮವನ್ನು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ದೀಪ ಬೆಳಗಿಸುವ ಮೂಲಕ ಉದ್ಘಾಟನೆ ಮಾಡಿದ್ರು.

ನಗರದ ವಿದ್ಯಾವರ್ಧಕ ಸಂಘದಲ್ಲಿ ಆಯೋಜಿಸಿದ ಕಾರ್ಯಕ್ರಮಯೊಂದರಲ್ಲಿ ಚನ್ನವೀರಗೌಡ ಅಣ್ಣಾ ಶಿದ್ರಾಮಗೌಡ ಪಾಟೀಲ ಸಂಸ್ಮರಣೆ ದತ್ತಿ ಕಾರ್ಯಕ್ರಮದ ಗ್ರಂಥವನ್ನು ಬಿಡುಗಡೆಗೊಳಿಸಿದ್ರು.

ಈ ವೇಳೆಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಸಿಎಂ
ಬಸವರಾಜ ಬೊಮ್ಮಾಯಿ,
ನಮ್ಮ ಸರ್ಕಾರಕ್ಕೆ ಮೇಕೆದಾಟು ಯೋಜನೆ ಬಗ್ಗೆ ಬದ್ಧತೆ ಇದೆ.
ಅದಕ್ಕಾಗಿ ನಾವು ಕೆಲಸ ಮಾಡುತ್ತಿದ್ದೇವೆ.‌
ರಾಜಕೀಯ ಲಾಭಕ್ಕಾಗಿ ಕಾಂಗ್ರೆಸ್ ನವರು ಪಾದಯಾತ್ರೆ ಮಾಡ್ತಾ ಇದ್ದಾರೆ.


ರಾಜಕಾರಣಕ್ಕಾಗಿ ಪಾದಯಾತ್ರೆ ಮಾಡುವವರು,
ಹೋರಾಟ ಮಾಡುವವರು ಮೊಸರಿನಲ್ಲಿ ಕಲ್ಲು ಹುಡುಕುವ ಕೆಲಸ ಮಾಡಿದಂಗೆ.
ಸಿದ್ದರಾಮಯ್ಯಾನವರು ಹೇಳಿದಕ್ಕೆಲ್ಲಾ ನಾನು ಉತ್ತರ ಕೊಡೊಕೆ ಆಗೋಲ್ಲಾ ಎಂದರು….

ಈ ಸಂದರ್ಭದಲ್ಲಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ, ದೇವರಹುಬ್ಬಳ್ಳಿಯ ಶ್ರೀ ಸಿದ್ಧಶಿವಯೋಗಿ ಸ್ವಾಮೀಜಿ, ಮಾಜಿ ಶಾಸಕ ಎ.ಬಿ. ದೇಸಾಯಿ, ಕರ್ನಾಟಕ ವಿದ್ಯಾವರ್ಧಕ ಸಂಘದ ಅಧ್ಯಕ್ಷ ಚಂದ್ರಕಾಂತ ಬೆಲ್ಲದ‍, ಮಾಜಿ ಶಾಸಕ ಅಕ್ಕಪ್ಪ ನಾಯ್ಕ, ಸಿ.ಎಸ್. ಪಾಟೀಲ, ಸೇರಿದಂತೆ ಇತರರಿದ್ದರು……

Related Articles

Leave a Reply

Your email address will not be published. Required fields are marked *

Back to top button