ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ
ಶ್ರೀ ಚನ್ನಬಸವ ಸಾಗರದಲ್ಲಿ ಆತ್ಮಹತ್ಯೆ ಮಾಡಿಕೊಂಡ ಯುವಕ!
ಹುಬ್ಬಳ್ಳಿ: ಯುವಕನೋರ್ವ ಕೆರೆಗೆ ಬಿದ್ದು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹುಬ್ಬಳ್ಳಿಯ ಶ್ರೀ ಚನ್ನಬಸವ ಸಾಗರ ದಲ್ಲಿ ನಡೆದಿದೆ.
ಅಂದಾಜು 28ರ ವಯಸ್ಸಿನ ಯುವಕನಾಗಿದ್ದು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಶಂಕೆ ವ್ಯಕ್ತವಾಗಿದೆ. ಇದುವರೆಗೂ ಯುವಕನ ಗುರುತು ಪತ್ತೆಯಾಗಿಲ್ಲ. ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಯುವಕನ ಶವ ಹೊರ ತೆಗೆದಿದ್ದಾರೆ.
ಇನ್ನೂ ಘಟನೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹುಬ್ಬಳ್ಳಿಯ ವಿದ್ಯಾನಗರ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ತನಿಖೆಯ ನಂತರವೇ ಘಟನೆಗೆ ಬಗ್ಗೆ ಹೆಚ್ಚಿನ ಮಾಹಿತಿ ಲಭ್ಯವಾಗಲಿದೆ.