ಸ್ಥಳೀಯ ಸುದ್ದಿ
ಸಿಡಿಲು ಬಡಿದು ಬಾಲಕ ಸಾವು.
ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ನೀರಲಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿದು 15 ವರ್ಷದ ಬಾಲಕನೊಬ್ಬ ಮೃತಪಟ್ಟಿದ್ದಾನೆ.
ಮೃತ ಮಹಾಂತೇಶ, ಹಾವೇರಿ ಜಿಲ್ಲೆ ಶಿಗ್ಗಾಂವಿ ತಾಲೂಕಿನ ಚಂದಾಪುರ ಗ್ರಾಮದ ನಿವಾಸಿ ಆಗಿದ್ದು,
ಜಮೀನಿಗೆ ತೆರಳಿದ್ದ ವೇಳೆ ಸಿಡಿಲು ಬಡಿದು ಈ ದುರ್ಘಟನೆ ಸಂಭವಿಸಿದೆ.
ಭಾರಿ ಗಾಳಿ ಮತ್ತು ಸಿಡಿಲಿನೊಂದಿಗೆ ಮಳೆಯಾಗುತ್ತಿದ್ದ ವೇಳೆ ಸಿಡಿಲಿಗೆ ಬಾಲಕ ಬಲಿಯಾಗಿದ್ದಾನೆ.
ಶಿಗ್ಗಾಂವಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಪ್ರಕರಣ ನಡೆದಿದೆ.