ಸೂಡಿ ಗ್ರಾಮ ಪಂಚಾಯತಿಗೆ ಭೇಟಿ ನೀಡಿದ : ತಾ.ಪಂ.ಇಒ ಡಾ. ಡಿ ಮೋಹನ್

ಸ್ಥಳೀಯ ಸಮಸ್ಯೆಗಳಿಗೆ ಸ್ಪಧಿಸಿ ಬೇಗ ಬಗೆಹರಿಸಿ
ಗ್ರಾ.ಪಂ.ಗೆ ಭೇಟಿ ನೀಡಿ ವಿವಿಧ ಕಾಮಗಾರಿಗಳ ಪರಿಶೀಲನೆ

ಗಜೇಂದ್ರಗಡ: ಸಮರ್ಪಕ ಕುಡಿಯುವ ನೀರು, ಚರಂಡಿ ಸ್ವಚ್ಛತೆ ಸೇರಿದಂತೆ ಇತರೆ ಮೂಲಭೂತ ಸಮಸ್ಯೆಗಳಿಗೆ ತಕ್ಷಣ ಸ್ಪಂದಿಸಿ ಸಮಸ್ಯೆಗಳನ್ನು ಬಗೆಹರಿಸಬೇಕು ಎಂದು ತಾಲೂಕ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳಾದ ಡಾ. ಡಿ ಮೋಹನ್ ಅವರು ಪಿಡಿಒ ಅವರಿಗೆ ಸೂಚಿಸಿದರು.
ತಾಲೂಕಿನ ಸೂಡಿ ಗ್ರಾಮ ಪಂಚಾಯತಿಗೆ ಮಂಗಳವಾರ ಬೆಳಗ್ಗೆ ಭೇಟಿ ನೀಡಿ, ಪೈಲ್ ಗಳನ್ನು ಪರಿಶೀಲಿನೆ, ವಿವಿಧ ಕಾಮಗಾರಿಗಳ ವೀಕ್ಷಣೆ ಮಾಡಿ ಅವರು ಮಾತನಾಡಿದರು.

ನೂತನ ಗ್ರಂಥಾಲಯ ಕಟ್ಟಡ ಕಾಮಗಾರಿ ವೀಕ್ಷಣೆ ಮಾಡಿ ತುರ್ತು ಕಾಮಗಾರಿ ಮುಗಿಸಲು ಸಂಬಂಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.ಬೂದು ನೀರು ನಿರ್ವಹಣೆ ಕಾಮಗಾರಿಗಳ ಸ್ಥಳ ಭೇಟಿ ನೀಡಿ ಪರಿಶೀಲಿಸಿದರು. ನಂತರ ತಾಂತ್ರಿಕ ಸಹಾಯಕರಿಗೆ ಅಂದಾಜು ಪತ್ರಿಕೆ ತಯಾರಿಸಿ ತ್ವರಿತವಾಗಿ ಕಾಮಗಾರಿ ಪ್ರಾರಂಭಿಸಬೇಕು.ಯಾವುದೇ ಕಾರಣಕ್ಕೂ ತಡ ಮಾಡಬಾರದು ಎಂದು ತಿಳಿಸಿದರು.

ಆರೋಗ್ಯ ಕೇಂದ್ರಕ್ಕೆ ಭೇಟಿ:
ಗ್ರಾಮದ ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು ಈ ವೇಳೆ ಉದ್ಯಾನವನ ಚೆನ್ನಾಗಿ ಇದೆ. ನಿತ್ಯ ಬೆಳಗ್ಗೆ ಒಂದು ಗಂಟೆ ಶ್ರಮದಾನ ಮಾಡಿ ಹುಲ್ಲು ಕಸ ಸ್ವಚ್ಛಗೊಳಿಸಿ ನಿಮ್ಮ ಆರೋಗ್ಯ ಚನ್ನಾಗಿರುತ್ತೆ. ಉದ್ಯಾನವನ ಚೆನ್ನಾಗಿ ಇರುತ್ತದೆ ಎಂದು ತಿಳಿಸಿದರು.ಸ್ಥಗಿತಗೊಂಡ ಘನ ತ್ಯಾಜ್ಯ ವಿಲೇವಾರಿ ಕಟ್ಟಡ ಭೇಟಿ ನೀಡಿ ಕಾಮಗಾರಿ ಪೂರ್ಣಗೊಳಿಸುವಂತೆ ಗುತ್ತಿಗೆದಾರರಿಗೆ ತಿಳಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಹೆಣ್ಣು ಮಕ್ಕಳ ಶಾಲೆಗೆ ಭೇಟಿ ನೀಡಿ ಶಾಲೆ ಶೌಚಾಲಯ ಕುಡಿಯುವ ನೀರು ಸಮಸ್ಯೆಗಳ ಆಲಿಸಿದರು ಸಮಸ್ಯೆಗಳನ್ನು ಬಹರಿಸುವುದಾಗಿ ಶಾಲೆಯ ಶಿಕ್ಷಕರಿಗೆ ತಿಳಿಸಿದರು. ಕಸ್ತೂರಿ ಬಾ ಗಾಂಧಿ ವಸತಿ ಶಾಲೆಗೆ ಭೇಟಿ ನೀಡಿ ಪಿಂಕ್ ಶೌಚಾಲಯ ವೀಕ್ಷಣೆ ಮಾಡಿದರು. ನಂತರ ಶಾಲೆಯ ಕಟ್ಟಡ, ಕಂಪೌಂಡ್, ಕುಡಿಯುವ ನೀರಿನ ಸಮಸ್ಯೆಗಳನ್ನು ಶಿಕ್ಷಕರು ಹೇಳಿಕೊಂಡರು. ತಕ್ಷಣ ಸಮಸ್ಯೆಗಳನ್ನು ಸರಿಪಡಿಸುವಂತೆ ಪಿಡಿಒ ಅವರಿಗೆ ಸೂಚಿಸಿದರು.
ದ್ಯಾಮಹುಣಶಿ ಗ್ರಾಮಕ್ಕೆ ಭೇಟಿ:

ಸೂಡಿ ಗ್ರಾಮ ಪಂಚಾಯತಿ ವ್ಯಾಪ್ತಿಯ ದ್ಯಾಮಹುಣಶಿ ಗ್ರಾಮಕ್ಕೆ ಭೇಟಿ ನೀಡಿ ಬೂದು ನೀರು ನಿರ್ವಹಣೆ ಕಾಮಗಾರಿ ಸ್ಥಳ ಪರಿಶೀಲಿಸಿ, ಕಾಮಗಾರಿ ಪ್ರಾರಂಭಿಸುವಂತೆ ಇಂಜನೀಯರ್ ಗೆ ತಿಳಿಸಿದರು. ಅಂಗನವಾಡಿ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಿದರು. ಮಕ್ಕಳ ಸಂಖ್ಯೆ ಕಡಿಮೆ ಇದ್ದು, ಹೆಚ್ಚು ಮಕ್ಕಳನ್ನು ಕರೆತರಬೇಕು ಎಂದು ಅಂಗವಾಡಿ ಕಾರ್ಯಕರ್ತೆಗೆ ತಿಳಿಸಿದರು.
ಸರಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಭೇಟಿ ನೀಡಿದಾಗ ಬಿಸಿಯೂಟ ಸಿಬ್ಬಂದಿಗಳು ವಯೋನಿವೃತ್ತಿ ಹೊಂದಿದ್ದಾರೆ. ಇದರಿಂದ ಅಡುಗೆ ಸಿಬ್ಬಂದಿಗಳು ಇಲ್ಲದೆ ಅಡುಗೆ ಸಮಸ್ಯೆಗಳ ಬಗ್ಗೆ ಆಲಿಸಿದರು. ಅಡುಗೆ ಸಿಬ್ಬಂದಿಗಳು ಇಲ್ಲವೆಂದರೆ ಮಕ್ಕಳಿಗೆ ಬಿಸಿಯೂಟ ಕೊಡಲು ಸಮಸ್ಯೆಯಾಗುತ್ತದೆ. ಕೂಡಲೇ ಶಾಲೆ ಶಿಕ್ಷಕರು, ಎಸ್ ಡಿ ಎಂಸಿ ಅಧ್ಯಕ್ಷರು, ಪಿಡಿಒ, ಗ್ರಾ.ಪಂ. ಅಧ್ಯಕ್ಷರ ಸಮ್ಮುಖದಲ್ಲಿ ಅಡುಗೆ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಪಿಡಿಒ ಬಿ.ಎನ್. ಇಟಗಿಮಠ, ಉಮೇಶ ಜಕ್ಕಲಿ, ಸಿದ್ದಪ್ಪ ಗುಡಿಮನಿ, ದುರಗಪ್ಪ ಚಲವಾದಿ, ಜ್ಯೋತಿ ವಡ್ಡರ, ಸುಧಾ ಕುಷ್ಟಗಿ, ಸಂತೋಷ, ಗ್ರಾ.ಪಂ. ಅಧ್ಯಕ್ಷರು, ಉಪಾಧ್ಯಕ್ಷರು, ಸದಸ್ಯರು ಹಾಗೂ ಪಂಚಾಯತ ಸಿಬ್ಬಂದಿಗಳು ಇದ್ದರು.