ಹಾಲಿ ಚಾಂಪಿಯನ್ ಗುಜರಾತ್ ಜಯ
ಅಹಮದಾಬಾದ್: ಶುಭಮನ್ ಗಿಲ್ ಭರ್ಜರಿ ಅರ್ಧಶತಕ ಹಾಗೂ ಕೊನೆಯಲ್ಲಿ ರಶೀದ್ ಖಾನ್, ರಾಹುಲ್ ತೆವಾಟಿಯಾ ಸಿಕ್ಸರ್, ಬೌಂಡರಿ ಆಟದ ನೆರವಿನಿಂದ ಗುಜರಾತ್ ಟೈಟಾನ್ಸ್ ಉದ್ಘಾಟನಾ ಪಂದ್ಯದಲ್ಲಿ ಸಿಎಸ್‍ಕೆ ವಿರುದ್ಧ ರೋಚಕ ಜಯ ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಮಾಡಿದ ಎಂ.ಎಸ್ ಧೋನಿ ನಾಯಕತ್ವದ ಚೆನ್ನೈ ಸೂಪರ್ ಕಿಂಗ್ಸ್ ತಂಡವು ನಿಗದಿತ ಓವರ್‍ಗಳಲ್ಲಿ 7 ವಿಕೆಟ್ ನಷ್ಟಕ್ಕೆ 178 ರನ್ ಗಳಿಸಿತು. 179 ರನ್‍ಗಳ ಗುರಿ ಪಡೆದ ಟೈಟಾನ್ಸ್ 19.2 ಓವರ್‍ಗಳಲ್ಲಿ 5 ವಿಕೆಟ್ ನಷ್ಟಕ್ಕೆ 182 ರನ್ ಗಳಿಸಿ ಜಯ ಸಾಧಿಸಿತು.
ಕೊನೆಯ 2 ಓವರ್‍ಗಳಲ್ಲಿ 25 ರನ್ ಬೇಕಿದ್ದಾಗ ರಾಹುಲ್ ತೆವಾಟಿಯಾ, ರಶೀದ್ ಖಾನ್ ಭರ್ಜರಿ ಸಿಕ್ಸರ್, ಬೌಂಡಿರಿ ಸಿಡಿಸಿ ತಂಡದ ಗೆಲುವಿಗೆ ಕಾರಣರಾದರು.
ಚೇಸಿಂಗ್ ಆರಂಭಿಸಿದ ಗುಜರಾತ್ ಟೈಟಾನ್ಸ್ ತಂಡ ಉತ್ತಮ ಶುಭಾರಂಭ ಪಡೆದುಕೊಂಡಿತು. ಆರಂಭಿಕರಾಗಿ ಕಣಕ್ಕಿಳಿದ ವೃದ್ಧಿಮಾನ್ ಸಹಾ, ಶುಭಮನ್ ಗಿಲ್ ಜೋಡಿ ಮೊದಲ ವಿಕೆಟ್ ಪತನಕ್ಕೆ 3.5 ಓವರ್‍ಗಳಲ್ಲಿ 37 ರನ್ ಸಿಡಿಸಿತ್ತು. ಈ ವೇಳೆ ಸಹಾ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ನಂತರ ಬಂದ ಸಾಯಿ ಸುದರ್ಶನ್ 17 ಎಸೆತಗಳಲ್ಲಿ 22 ರನ್ ಗಳಿಸಿದರೆ, ನಾಯಕ ಹಾರ್ದಿಕ್ ಪಾಂಡ್ಯ 8 ರನ್ ಗಳಿಸಿ ಔಟಾದರು.