ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ
ಹಿರಿಯ ಪತ್ರಕರ್ತ ಪ್ರಕಾಶ್ ಮಹಾಜನ್ ಶೆಟ್ಟರ್ ನಿಧನ!
ಹುಬ್ಬಳ್ಳಿ
ಹಿರಿಯ ಪತ್ರಕರ್ತರಾದ ಪ್ರಕಾಶ ಮಹಾಜನ್ ಶೇಟ್ಟರ್ ಅವರು ಇಂದು ಕಿಮ್ಸ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.
ಈ ಸಂಜೆ ದಿನಪತ್ರಿಕೆ ಸೇರಿದಂತೆ ಅನೇಕ ಪತ್ರಿಕೆಗಳಲ್ಲಿ ಕಾರ್ಯನಿರ್ವಹಿಸಿದ್ದ ಪ್ರಕಾಶ್ ಮಹಾಜನ್ ಶೇಟ್ಟರ್ ಅವರು ಕಳೆದ ಕೆಲ ತಿಂಗಳುಗಳಿಂದ ಅನಾರೋಗ್ಯದ ನಿಮಿತ್ತ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಇಂದು ಬೆಳಗಿನ ಜಾವ ಆರೋಗ್ಯದಲ್ಲಿ ಏರುಪೆರಾಗಿದ್ದು ಇಹಲೋಕ ತ್ಯಜಿಸಿದ್ದಾರೆ. ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಮೃತರ ಅಂತ್ಯಕ್ರಿಯೆಯನ್ನು ಕಲ್ಬುರ್ಗಿ ಮಠ ಮಂಟೂರ ರಸ್ತೆ ಹುಬ್ಬಳ್ಳಿಯಲ್ಲಿ ನೆರವೆರಿಸುವುದಾಗಿ ತಿಳಿಸಿದ್ದಾರೆ.
ಅಪಾರ ಬಂಧು, ಬಳಗವನ್ನು ಹೊಂದಿದ್ದ ಪ್ರಕಾಶ್ ಮಹಾಜನ್ ಶೆಟ್ಟರ ಅವರ ಅಗಲಿಕೆಗೆ ಧಾರವಾಡ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘವು ಶ್ರದ್ಧಾಂಜಲಿ ಸಲ್ಲಿಸಿದೆ.