ರಾಜ್ಯ

ಹುಬ್ಬಳ್ಳಿಯಲ್ಲಿ ಶಾಲೆ ಗೋಡೆ ಕುಸಿದು ವಿದ್ಯಾರ್ಥಿ ಸಾವು!

Power city News/ಹುಬ್ಬಳ್ಳಿ : ತಾಲ್ಲೂಕಿನ ಕಿರೇಸೂರ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಾಣವಾಗುತ್ತಿರುವ ಕೊಠಡಿಯ ಗೋಡೆ ಶುಕ್ರವಾರ ಬೆಳಿಗ್ಗೆ ಕುಸಿದು ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ. ಮತ್ತೊಬ್ಬ ವಿದ್ಯಾರ್ಥಿ ಗಾಯಗೊಂಡಿದ್ದು, ಕಿಮ್ಸ್’ಗೆ ದಾಖಲಿಸಲಾಗಿದೆ.

ಮೃತ ದುರ್ದೈವಿಯನ್ನು ಮೂರನೇ ತರಗತಿಯಲ್ಲಿ ಒದುತ್ತಿ ವಿದ್ಯಾರ್ಥಿ ವಿಸ್ತ್ರತ ಬೆಳಗಲಿ(9) . ಹಾಗೂ ಗಾಯಾಳುವನ್ನು ಏಳನೇ ತರಗತಿ ವಿದ್ಯಾರ್ಥಿ ಪ್ರಜ್ವಲ್ ನಾಗಾವಿ ಎಂದು ಗುರುತಿಸಲಾಗಿದೆ.

ಇಂದು ಬೆಳಿಗ್ಗೆ ಎಂದಿನಂತೆ ಶಾಲೆಗೆ ಬಂದಿದ್ದ ಮಕ್ಕಳು ಸಮೀಪದ ನಿರ್ಮಾಣ ಹಂತದಲ್ಲಿರುವ ಶಾಲಾ ಕೊಠಡಿಯ ಬಳಿ ಆಟವಾಡುತ್ತಿದ್ದರು. ಇ ಸಮಯದಲ್ಲಿ ಏಕಾಏಕಿ ಗೋಡೆ ಕುಸಿದು ಮಕ್ಕಳ ಮೇಲೆ ಬಿದ್ದಿದೆ. ಗೊಡೇಯ ರಭಸಕ್ಕೆ ಬಾಲಕ ವಿಸ್ತ್ರತ ಸ್ಥಳದಲ್ಲಿಯೇ ಮೃತಪಟ್ಟಿದ್ದಾನೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ಬಾಲಕನ ಮೃತದೇಹ ಕಿಮ್ಸ್ ಶವಾಗಾರಕ್ಕೆ ರವಾನಿಸಲಾಗಿದ್ದು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *

Back to top button