ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ

ಹೈ ವೊಲ್ಟೇಜ್ “MP ಎಲೆಕ್ಷನ್‌”ಗೆ ಪಾಪ್ಯೂಲರ್ ಜೋಶಿ ವಿರುದ್ಧ ಶಿವಲಿಲಾ ಕುಲಕರ್ಣಿ ಫಿಕ್ಸ್!

powercity news:

ಹುಬ್ಬಳ್ಳಿ: ರಾಜ್ಯ ರಾಜಕೀಯ ವಲಯದಲ್ಲಿ ಲೋಕಸಭಾ ಚುನಾವಣೆಯ ಕಾವು ದಿನದಿದಂದ ದಿನಕ್ಕೆ ಸದ್ದುಮಾಡತೊಡಗಿದೆ. ಧಾರವಾಡ ಜಿಲ್ಲೆಯಲ್ಲಿ ಅದಾಗಲೇ ರಾಜಕೀಯ ಚಟುವಟಿಕೆಗಳು ಗರಿಗೆದರಿದ್ದು, ಕೈ ಕಮಲಗಳ ನಡುವಿನ ಜಟಾಪಟಿ ಜೋರಾಗಿದೆ.

ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ಶಾಸಕ ವಿನಯ ಕುಲಕರ್ಣಿಯವರ ಪತ್ನಿ ಶಿವಲೀಲಾ ಕುಲಕರ್ಣಿ ಅವರನ್ನು ಕಣಕ್ಕಿಳಿಸಲು ಕಾಂಗ್ರೆಸ್‌ ಚಿಂತನೆ ನಡೆಸಿದೆ ಎನ್ನಲಾಗುತ್ತಿದೆ.

ಹೌದು..ಈ ಕ್ಷೇತ್ರದಲ್ಲಿ 1996ರಿಂದ ಬಿಜೆಪಿ ನಿರಂತರವಾಗಿ ಗೆಲುವು ಸಾಧಿಸುತ್ತಲೆ ಬಂದಿದೆ. ಆದರೆ ಇಲ್ಲಿಯವರೆಗೂ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರು ನಾಲ್ಕು ಅವಧಿಯಿಂದಲೂ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದಾರೆ. ಅವರ ಎದುರು ಅಭ್ಯರ್ಥಿಯಾಗಿ ಶಿವಲೀಲಾ ಅವರನ್ನು ಕಣಕ್ಕಿಳಿಸಲು ಪಕ್ಷದ ಮುಖಂಡರು ಚರ್ಚೆ ನಡೆಸಿದ್ದಾರೆ.

ಹಿಂದಿನ ಎರಡು ಲೋಕಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರದಿಂದ ವಿನಯ ಕುಲಕರ್ಣಿ ಅವರು ಸ್ಪರ್ಧಿಸಿ, ಸೋತಿದ್ದರು. 8 ವಿಧಾನಸಭಾ ಕ್ಷೇತ್ರಗಳು ಒಳಗೊಂಡ ಈ ಲೋಕಸಭಾ ಕ್ಷೇತ್ರದಾದ್ಯಂತ ಓಡಾಡಿ, ವಿನಯ ಕುಲಕರ್ಣಿ ಜನಸಂಪರ್ಕ ಬೆಳೆಸಿಕೊಂಡಿದ್ದಾರೆ.

ಧಾರವಾಡ, ಹುಬ್ಬಳ್ಳಿ–ಧಾರವಾಡ ಪೂರ್ವ, ಹುಬ್ಬಳ್ಳಿ–ಧಾರವಾಡ ಪಶ್ಚಿಮ, ಹುಬ್ಬಳ್ಳಿ– ಧಾರವಾಡ ಕೇಂದ್ರ, ನವಲಗುಂದ, ಕಲಘಟಗಿ, ಕುಂದಗೋಳ ಹಾಗೂ ಹಾವೇರಿ ಜಿಲ್ಲೆಯ ಶಿಗ್ಗಾಂವ ಸೇರಿ 5 ಕ್ಷೇತ್ರಗಳಲ್ಲಿ ಕಾಂಗ್ರೆಸ್‌ ಶಾಸಕರು ಇದ್ದಾರೆ. ವಿನಯ ಕುಲಕರ್ಣಿ ಧಾರವಾಡ ಗ್ರಾಮೀಣ ಕ್ಷೇತ್ರದ ಶಾಸಕರಾಗಿದ್ದಾರೆ. ಈ ನಿಟ್ಟಿನಲ್ಲಿ ಜೋಶಿ ವಿರುದ್ಧ ಶಿವಲೀಲಾ ಕುಲಕರ್ಣಿ ಕಣಕ್ಕೆ ಇಳಿಸಲು ತೆರೆ ಮರೆಯ ಕಸರತ್ತು ನಡೆದಿದೆ.

ಆದರೆ ಶಾಸಕ ವಿನಯ ಕುಲಕರ್ಣಿಗೆ ನ್ಯಾಯಾಲಯ ದಿಂದ ಇರುವ ಧಾರವಾಢ ಜಿಲ್ಲಾ ಪ್ರವೇಶಕ್ಕೆ ನಿರ್ಭಂದ ಹೇರಿರುವ ಹಿನ್ನೆಲೆಯಲ್ಲಿ ವಿಧಾನಸಭಾ ಚುನಾವಣೆಯಲ್ಲಿ ಧಾರವಾಡ ಕ್ಷೇತ್ರಕ್ಕೆ ಬರಲು ಸಾಧ್ಯವಾಗಲಿಲ್ಲ.

ಒಂದು ದಿನವೂ ಪ್ರಚಾರಕ್ಕೆ ಬರಲು ಆಗಲಿಲ್ಲ. ಆಗ ಅವರ ಪರವಾಗಿ ಪತ್ನಿ ಶಿವಲೀಲಾ ಪ್ರಚಾರ ಕೈಗೊಂಡರು. ಇಡೀ ಕ್ಷೇತ್ರದ ತುಂಬ ಸುತ್ತಾಡಿ, ಮತದಾರರನ್ನು ಭಾವನಾತ್ಮಕವಾಗಿ ಸೆಳೆದರು. 18 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ವಿನಯ ಅವರನ್ನು ಗೆಲ್ಲಿಸಿದರು. ಈ ನಿಟ್ಟಿನಲ್ಲಿ ಕಾಂಗ್ರೆಸ್ ಶಿವಲೀಲಾ ಕುಲಕರ್ಣಿ ಅವರಿಗೆ ಮಣೆ ಹಾಕುವಲ್ಲಿ ಚಿಂತನೆ ನಡೆಸಿದೆ

Related Articles

Leave a Reply

Your email address will not be published. Required fields are marked *

Back to top button