
POWER CITY NEWS:HUBBALLIಹುಬ್ಬಳ್ಳಿ:ಕೇಂದ್ರ ಸರ್ಕಾರದ ವಕ್ಫ್ ಕಾಯ್ದೆ ತಿದ್ದುಪಡಿಗೆ ವಿರೋಧಿಸಿ ಹುಬ್ಬಳ್ಳಿಯ”ಅಂಜುಮನ್ ಎ ಇಸ್ಲಾಮ್”ಸಂಸ್ಥೆಯಿಂದ ಬಾಬಾಸಾಹೇಬ್ ಅಂಬೇಡ್ಕರ್ ವೃತ್ತದಿಂದ ತಹಶಿಲ್ದಾರ ಕಚೇರಿಯ ವರೆಗೂ ಬೃಹತ್ ಪ್ರತಿಭಟನೆ ಹಮ್ಮಿಕೊಂಡಿದೆ.
ಇ ವೇಳೆ ಪ್ರತಿಭಟನೆಗೆ ಕರೆ ನೀಡಿರುವ ಅಂಜುಮನ್ ಸಂಸ್ಥೆಯ ಕಾರ್ಯದರ್ಶಿ ಇರ್ಷಾದ್ ಅವರು ಮಾತನಾಡಿ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಅಲ್ಪಸಂಖ್ಯಾತರ ಹಕ್ಕುಗಳನ್ನು ಕಸಿಯುತ್ತಿದೆ. ಇದೀಗ ಇಂತಹದೇ ಕಾರ್ಯಕ್ಕೆ ಮುಂದಾಗಿರುವ ಕೇಂದ್ರ ಸರ್ಕಾರ ವಕ್ಫ್ ಕಾಯ್ದೆಯನ್ನು ತಿದ್ದುಪಡಿ ಮಾಡುವ ಮೂಲಕ ಅಲ್ಪಸಂಖ್ಯಾತರ ಸಾವಿರಾರು ಕೋಟಿ ಬೆಲೆ ಬಾಳುವ ಆಸ್ತಿಗಳ ಮೇಲೆ ಸ್ವ ಹಿತಾಸಕ್ತಿ ತೋರುತ್ತಿರುವ ಕೇಂದ್ರ ಸರ್ಕಾರದ ತಿದ್ದುಪಡಿಗೆ ರಾಷ್ಟ್ರಪತಿಗಳು ಅಂಕಿತ ಹಾಕಬಾರದು ಎಂದು ಆಗ್ರಹಿಸಿ ನಾಳೆ ಮದ್ಯಾಹ್ನ 3ಗಂಟೆಗೆ ಅಂಜುಮನ್ ಸಂಸ್ಥೆಯ ವತಿಯಿಂದ ವಕ್ಫ್ ಕಾಯ್ದೆ ತಿದ್ದುಪಡಿ ವಿರೋಧಿಸಿ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ.ಎಂದು ತಿಳಸಿದ್ದಾರೆ. ಅಲ್ಲದೆ ಪ್ರತಿಭಟನೆಯ ನೆಪದಲ್ಲಿ ದೇಶವಿರೋಧಿ ಘೋಷಣೆಗಳು ಹಾಗೂ ಕಾನೂನು ಬಾಹಿರ ಯಾವುದೇ ಚಟುವಟಿಕೆಗಳಿಗೆ ಅವಕಾಶ ನೀಡಬಾರದು ಎಂದು ಎಚ್ಚರಿಸಿದ್ದಾರೆ.