Jannah Theme License is not validated, Go to the theme options page to validate the license, You need a single license for each domain name.
BREAKING NEWSCITY CRIME NEWSPoliceTWINCITY

ದರೋಡೆಕೋರನ ಮೇಲೆ ಪೊಲೀಸ್ ಫೈರಿಂಗ್ !

DAKHANI

POWER CITY NEWS : HUBLI ಹುಬ್ಬಳ್ಳಿ:- ಹುಬ್ಬಳ್ಳಿಯಲ್ಲಿ ದರೋಡೆ ಆರೋಪಿ ಕಾಲಿಗೆ ಪೊಲೀಸರು ಗುಂಡು ಹಾರಿಸಿ ಅರೆಸ್ಟ್ ಮಾಡಿದ್ದಾರೆ. ಈ ಮೂಲಕ ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಮತ್ತೆ ಪೊಲೀಸ್ ರಿವಾಲ್ವಾರ್ ಸದ್ದು ಮಾಡಿದಂತಾಗಿದೆ.
ದರೋಡೆ ಪ್ರಕರಣದ ಆರೋಪಿ ಸೋನು ನಾಯಕ್ ಗುಂಡೇಟು ತಿಂದು ಗಾಯಗೊಂಡವನು. ಹುಬ್ಬಳ್ಳಿ ಉಪನಗರದ ಠಾಣೆ ಇನ್ಸ್‌ಪೆಕ್ಟರ್ ಎಂ.ಎಸ್. ಹೂಗಾರ್ ಅವರಿಂದ ಫೈರಿಂಗ್ ನಡೆದಿದೆ.

ಹುಬ್ಬಳ್ಳಿಯ ಎಂಟಿಎಸ್‌ ಕಾಲೊನಿ ಬಳಿ ಘಟನೆ ನಡೆದಿದೆ. ಕಳ್ಳತನ, ದರೋಡೆ ಪ್ರಕರಣದಲ್ಲಿ ಬೇಕಾಗಿದ್ದ ಆರೋಪಿ ಸೋನು ನಾಯಕ್ ಮೇಲೆ ಒಟ್ಟು 12 ಪ್ರಕರಣಗಳು ದಾಖಲಾಗಿವೆ.ಸ್ಥಳಕ್ಕೆ ಕಮಿಷನರ್ ಎನ್.ಶಶಿಕುಮಾರ್ ಭೇಟಿ ನೀಡಿದ್ದಾರೆ. ಗಾಯಾಳು ಆರೋಪಿಯನ್ನು ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Related Articles

Leave a Reply

Your email address will not be published. Required fields are marked *