BREAKING NEWSDHARWADGood jobLife Style

ಮತದಾರರ ಪಟ್ಟಿಯಲ್ಲಿ ಹೆಸರುಗಳ ಸೇರ್ಪಡೆ ಮತ್ತು ತಿದ್ದುಪಡಿಗೆ ಅವಕಾಶ!

Voter list !

POWERCITY NEWS:HUBBALLI

ಹುಬ್ಬಳ್ಳಿ: (ಪವರ್‌ಸಿಟಿ ಸುದ್ದಿ) ನ.11: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಬರುವ 72-ಹುಬ್ಬಳ್ಳಿ- ಧಾರವಾಡ ಪೂರ್ವ, 73-ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಹಾಗೂ 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರಗಳಿಗೆ ಸಂಬಂಧಿಸಿದಂತೆ ಈಗಾಗಲೇ ಕರಡು ಮತದಾರರ ಪಟ್ಟಿಯನ್ನು ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಅವರ ನಿರ್ದೇಶನದನ್ವಯ ಅಕ್ಟೋಬರ್ 27ರಂದು ಪ್ರಕಟಿಸಿಲಾಗಿದೆ.
ಕರಡು ಮತದಾರರ ಪಟ್ಟಿಯನ್ನು ಪ್ರತಿಯೊಬ್ಬ ಮತದಾರರು ಪರಿಶೀಲಿಸಿ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ನಮೂದು ಇರುವ ಬಗ್ಗೆ ಖಾತ್ರಿ ಪಡಿಸಿಕೊಳ್ಳಲು ಹಾಗೂ ಮತದಾರರ ಪಟ್ಟಿಯಲ್ಲಿ ಈಗಾಗಲೇ ಹೆಸರು ನಮೂದು ಇದ್ದು ಆ ಹೆಸರು ಮತದಾರರ ಪಟ್ಟಿಯಿಂದ ಬಿಟ್ಟು ಹೋಗಿದ್ದಲ್ಲಿ ಕೂಡಲೇ ಹೆಸರು ಸೇರ್ಪಡೆ ಮಾಡಿಕೊಳ್ಳಲು, ಮತದಾರರ ಪಟ್ಟಿಯಿಂದ ಕೈ ಬಿಡಲು ಹಾಗೂ ವರ್ಗಾವಣೆ/ತಿದ್ದುಪಡಿಗೆ ಡಿಸೆಂಬರ್ 9ರವರೆಗೆ ಅವಕಾಶವಿದ್ದು, ವೋಟರ್ ಹೆಲ್ಪಲೈನ್ ಅಪ್ಲಿಕೇಶನ್ ಮೂಲಕ ಅವಶ್ಯಕ ದಾಖಲೆಗಳೊಂದಿಗೆ ಆನ್‌ಲೈನ್ ಅರ್ಜಿ ಸಲ್ಲಿಸಿ ತಮ್ಮ ಹೆಸರು ಸೇರ್ಪಡೆ, ವರ್ಗಾವಣೆ/ತಿದ್ದುಪಡಿ ಮಾಡಿಸಿಕೊಳ್ಳಬಹುದಾಗಿದೆ.
2005 ಮತ್ತು 2006ನೇ ಇಸ್ವಿಯಲ್ಲಿ ಜನನರಾದ ಯುವ ಮತದಾರರಿಗೆ ಕೂಡ ಮತದಾರರ ಪಟ್ಟಿಯಲ್ಲಿ ಹೆಸರು ಸೇರ್ಪಡೆ ಮಾಡಿಸಿಕೊಳ್ಳಲು ಅವಕಾಶವಿದೆ. ಈ ಬಗ್ಗೆ ಸಂಬಂಧಪಟ್ಟಂತೆ ತಮ್ಮ ಭಾಗದ ಮತಗಟ್ಟೆ ಮಟ್ಟದ ಅಧಿಕಾರಿಗಳು (ಬಿಎಲ್‌ಓ)/ ಮತದಾರರ ನೊಂದಣಾಧಿಕಾರಿಗಳು, ಸಹಾಯಕ ಮತದಾರರ ನೊಂದಣಾಧಿಕಾರಿಗಳ ಕಚೇರಿಗೆ ಭೇಟಿಯಾಗಿ ಮಾಹಿತಿಯನ್ನು ಪಡೆದುಕೊಳ್ಳಬಹುದಾಗಿದೆ.
ಹೆಚ್ಚಿನ ವಿವರಗಳಿಗಾಗಿ ವೋಟರ್ ಹೆಲ್ಪಲೈನ್ ಅಪ್ಲಿಕೇಶನ್ ಮೂಲಕ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ಪರಿಶೀಲನೆ ಮತ್ತು ನೊಂದಾಯಿಸಿಕೊಳ್ಳಬಹುದಾಗಿದೆ. ಹೆಸರು ಸೇರ್ಪಡೆ ಮಾಡಿಕೊಳ್ಳಲು, ಮತದಾರರ ಪಟ್ಟಿಯಿಂದ ಕೈಬಿಡಲು ಹಾಗೂ ವರ್ಗಾವಣೆ/ತಿದ್ದುಪಡಿಗೆ ಮಾನ್ಯ ಮುಖ್ಯ ಚುನಾವಣಾಧಿಕಾರಿಗಳು ಬೆಂಗಳೂರು ಅವರ ನಿರ್ದೇಶನದನ್ವಯ ನವೆಂಬರ್ 18 ಮತ್ತು ಮತ್ತು 19 ಹಾಗೂ ಡಿಸೆಂಬರ್ 2 ಮತ್ತು 3 ರಂದು ವಿಶೇಷ ಅಭಿಯಾನವನ್ನು ಜರುಗಿಸಲಾಗುವುದು. 72-ಹುಬ್ಬಳ್ಳಿ-ಧಾರವಾಡ ಪೂರ್ವ, 73- ಹುಬ್ಬಳ್ಳಿ-ಧಾರವಾಡ ಸೆಂಟ್ರಲ್ ಹಾಗೂ 74-ಹುಬ್ಬಳ್ಳಿ-ಧಾರವಾಡ ಪಶ್ಚಿಮ ವಿಧಾನಸಭಾ ಮತಕ್ಷೇತ್ರಗಳಿಗೆ ಸಂಭಂಧಪಟ್ಟಂತೆ ಎಲ್ಲ ಮತದಾರರು ಈ ದಿನಗಳಂದು ಆಯಾ ಮತಗಟ್ಟೆಗಳ ಮತಗಟ್ಟೆ ಮಟ್ಟದ ಅಧಿಕಾರಿಗಳು ತಮ್ಮ ತಮ್ಮ ಮತಗಟ್ಟೆಗಳಲ್ಲಿ ಲಭ್ಯವಿದ್ದು, ವಿಶೇಷ ಅಭಿಯಾನದ ಸದುಪಯೋಗ ಪಡೆದುಕೊಳ್ಳಬೇಕು ಎಂದು ಮತದಾರರ ನೊಂದಣಾಧಿಕಾರಿಗಳು ಮತ್ತು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ. ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button