ಬೆಂಗಳೂರು

ಚೆನ್ನವೀರ ಕಣವಿ ಶೀಘ್ರ ಚೇತರಿಕೆಗೆ ಮುಖ್ಯಮಂತ್ರಿಗಳ ಹಾರೈಕೆ

ಬೆಂಗಳೂರು

ಉಸಿರಾಟದ ತೊಂದರೆಯಿಂದ ಧಾರವಾಡದ ಎಸ್.ಡಿ.ಎಂ.ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ನಾಡಿನ ಹಿರಿಯ ಸಾಹಿತಿ, ಕವಿ, ನಾಡೋಜ ಡಾ|| ಚೆನ್ನವೀರ ಕಣವಿ ಅವರು ಶೀಘ್ರ ವಾಗಿ ಗುಣಮುಖರಾಗುವಂತೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾರೈಸಿದ್ದಾರೆ.

ಕಣವಿ ಅವರ ಆರೋಗ್ಯದ ಕುರಿತು ಅವರ ಕುಟುಂಬದ ಸದಸ್ಯರೊಂದಿಗೆ ಇಂದು ಮಾತನಾಡಿ ಅವರ ಆರೋಗ್ಯದ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಮುಖ್ಯ ಮಂತ್ರಿಗಳು ಡಾ|| ಚೆನ್ನವೀರ ಕಣವಿ ಅವರು ಶೀಘ್ರವಾಗಿ ಗುಣಮುಖರಾಗಲೆಂದು ಟ್ವೀಟ್ ಮಾಡಿದ್ದಾರೆ.

ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ; ಚಿಕಿತ್ಸೆ ಮುಂದುವರಿಕೆ

ಎಸ್.ಡಿ.ಎಮ್. ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ
ಹಿರಿಯ ಕವಿಗಳಾದ ನಾಡೋಜ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದಲ್ಲಿ ಚೇತರಿಕೆ ಆಗಿದ್ದು, ಆರೋಗ್ಯ ಸ್ಥಿರವಾಗಿದೆ .

ಆಸ್ಪತ್ರೆ ವೈದ್ಯರು ಉತ್ತಮ ಚಿಕಿತ್ಸೆ ನೀಡುತ್ತಿದ್ದಾರೆ. ಜಿಲ್ಲಾಡಳಿತ ಎಸ್.ಡಿ.ಎಮ್. ಆಸ್ಪತ್ರೆಯ ಮ್ಯಾನೆಜ್‌ಮೆಂಟ್‌ ದೊಂದಿಗೆ ನಿರಂತರ ಸಂಪರ್ಕದಲ್ಲಿದ್ದು ನಾಡೋಜ ಡಾ. ಚೆನ್ನವೀರ ಕಣವಿ ಅವರ ಆರೋಗ್ಯ ಕ್ಷೇಮತೆಗೆ ಕ್ರಮವಹಿಸಿದೆ ಎಂದು ಜಿಲ್ಲಾಡಳಿತ ಪ್ರಕಟಣೆಯಲ್ಲಿ ತಿಳಿಸಿದೆ.

Related Articles

Leave a Reply

Your email address will not be published. Required fields are marked *

Back to top button