Jannah Theme License is not validated, Go to the theme options page to validate the license, You need a single license for each domain name.
armyBJPCITY CRIME NEWSDAVANGEREHAASANL&TPoliceRainSportsTech

ವಿಚಿತ್ರ ಶಬ್ದಕ್ಕೆ ಬೆಸ್ತುಬಿದ್ದ ಗ್ರಾಮಸ್ಥರು!

POWER CITYNEWS :DAVANGERE/ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಚಿಕ್ಕಮಲ್ಲನಹೊಳೆ ಗ್ರಾಮದಲ್ಲಿ ಶನಿವಾರ ರಾತ್ರಿ ಭಾರೀ ಶಬ್ಧವೊಂದು ಕೇಳಿ ಬಂದಿದ್ದು, ಗ್ರಾಮದಜನರು ಬೆಚ್ಚಿ ಬಿದ್ದಿದ್ದಾರೆ. ಕೆಲ ಕಡೆಗಳಲ್ಲಿ ಭೂಮಿ ಕಂಪಿಸಿದ ಅನುಭವವೂ ಆಗಿದೆ, ಎಂದು ತಿಳಿದು ಬಂದಿದೆ. ಚಿಕ್ಕಮಲ್ಲನಹೊಳೆ ಗ್ರಾಮವು ವಿಜಯನಗರ ಜಿಲ್ಲೆ ಮತ್ತು ದಾವಣಗೆರೆ ಜಿಲ್ಲೆಗಳ ಗಡಿಭಾಗದಲ್ಲಿದ್ದು, ಶಬ್ದವಾಗುತ್ತಿದ್ದಂತೆ ಜನರು ಮನೆಯಿಂದ ಹೊರಗೆ ಓಡಿ ಬಂದಿದ್ದಾರೆ. ರಾತ್ರಿ 8 ಗಂಟೆ ಸುಮಾರಿಗೆ ವಿಚಿತ್ರ ಶಬ್ಧ ಕೇಳಿಸಿದ್ದು, ಕೆಲ ಮನೆಗಳಲ್ಲಿರುವ ಪಾತ್ರೆಗಳು ನೆಲಕ್ಕೆ ಬಿದ್ದಿವೆ.‌ ಯಾವ ಕಾರಣಕ್ಕೆ ಈ ವಿಚಿತ್ರ ಶಬ್ಧ ಬಂದಿದೆ ಎನ್ನುವುದು ಇನ್ನೂ ತಿಳಿದುಬಂದಿಲ್ಲ.

ಸ್ಥಳಕ್ಕೆ ಭೇಟಿ ನೀಡಿದ ಜಗಳೂರು ಠಾಣೆ ಪೊಲೀಸರು ಹಾಗೂ ಅಧಿಕಾರಿಗಳು ಘಟನೆ ಕುರಿತು ಪರಿಶೀಲನೆ ‌ನಡೆಸಿದ್ದಾರೆ. ಘಟನೆಯ ಕುರಿತು ಜಗಳೂರು ತಹಸೀಲ್ದಾರ್ ಸಯ್ಯದ್ ಕಲೀಂವುಲ್ಲಾ ಅವರು ಪ್ರತಿಕ್ರಿಯೆ ನೀಡಿದ್ದಾರೆ. ನಮ್ಮ ತಾಲೂಕಿನ ವ್ಯಾಪ್ತಿಯಲ್ಲಿ ಯಾವುದೇ ಸ್ಫೋಟ ಸಂಭವಿಸಿಲ್ಲ. ಆದರೆ, ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಲ್ಲಳ್ಳಿ ಕಡೆಯಿಂದ ಸ್ಫೋಟದ ಶಬ್ದದ ಅನುಭವ ಆಗಿರುವ ಮಾಹಿತಿ ಇದೆ ಎಂದು ತಿಳಿಸಿದ್ದಾರೆ. ಸ್ಥಳಕ್ಕೆ ಗ್ರಾಮಲೆಕ್ಕಿಗರು ಭೇಟಿ ನೀಡಿ, ಮಾಹಿತಿ ಸಂಗ್ರಹಿಸಿದ್ದಾರೆ. ಜಗಳೂರು ತಾಲೂಕಿನ ಜನರು ಯಾವುದೇ ಭಯಪಡುವ ಅಗತ್ಯವಿಲ್ಲ ಮನವಿ ಮಾಡಿದ್ದಾರೆ.

Related Articles

Leave a Reply

Your email address will not be published. Required fields are marked *