ರಾಜಕೀಯರಾಜ್ಯಸ್ಥಳೀಯ ಸುದ್ದಿಹುಬ್ಬಳ್ಳಿ

ತಾಲೂಕು ಆಡಳಿತ ಹಾಗೂ ವಿವಿಧ ಇಲಾಖೆಗಳ ಅಡಿಯಲ್ಲಿ ಸಂವಿಧಾನ ದಿನಾಚರಣೆ!

ಹುಬ್ಬಳ್ಳಿ ( ಕರ್ನಾಟಕ ವಾರ್ತೆ ) ನ.26:

ಇಂದು ತಾಲೂಕು ಆಡಳಿತ ಸೌಧದ ತಹಸೀಲ್ದಾರ ಸಭಾಂಗಣದಲ್ಲಿ ತಾಲೂಕು ಆಡಳಿತ, ತಾಲೂಕು ಪಂಚಾಯತ, ಸಮಾಜ ಕಲ್ಯಾಣ ಸೇರಿದಂತೆ ವಿವಿಧ ಇಲಾಖೆಗಳ ಸಹಯೋಗದಲ್ಲಿ ಸಂವಿಧಾನ ದಿನವನ್ನು ಆಚರಿಸಲಾಯಿತು.

ತಾಲೂಕು ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿ ಗಂಗಾಧರ್ ಕಂದಕೂರ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಗ್ರಾಮೀಣ ತಹಸೀಲ್ದಾರ ಪ್ರಕಾಶ ನಾಶಿ, ಗ್ರೇಡ್ 2 ತಹಸೀಲ್ದಾರ ಜಿ.ವಿ. ಪಾಟೀಲ್, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕಿ ಸಿ.ಆರ್. ಅಂಬಿಗೇರ, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ಹಾಜರಿದ್ದರು.


Related Articles

Leave a Reply

Your email address will not be published. Required fields are marked *

Back to top button