Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿ ಸಾವು..!

ಧಾರವಾಡ

ಜಗಳ ಬಿಡಿಸಲು ಹೋಗಿದ್ದ ವ್ಯಕ್ತಿಗೆ ಬಲವಾದ ಪೆಟ್ಟು ಬಿದ್ದ ಹಿನ್ನೆಲೆಯಲ್ಲಿ ಗಾಯಗೊಂಡಿರುವ ಆತ ಸಾವನ್ನಪ್ಪಿರುವ ಘಟನೆ ನಗರದ ಪೆಂಡಾರ್‌ ಗಲ್ಲಿಯಲ್ಲಿ ನಿನ್ನೆ ತಡರಾತ್ರಿ ನಡೆದಿದೆ.
ಪೆಂಡಾರ್ ಗಲ್ಲಿಯಲ್ಲಿ ಮದುವೆ ಸಮಾರಂಭವೊಂದರಲ್ಲಿ, ಊಟದ ವಿಚಾರವಾಗಿ ಇಬ್ಬರ ಮಧ್ಯೆ ಜಗಳ ನಡೆಯುತ್ತಿತ್ತು. ಈ ಜಗಳ ಬಿಡಿಸಲು ಹೋದ ಸಾದಿಕ್ ಬಿಡ್ನಾಳ ಎಂಬ ವ್ಯಕ್ತಿಯು ತಳ್ಳಾಟ, ನೂಕಾಟದಲ್ಲಿ ಸಿಲುಕಿದ್ದರಿಂದ ಆತನ ತಲೆಗೆ ಗೇಟ್ ಬಡಿದು ಸಾವನ್ನಪ್ಪಿದ್ದಾನೆ.

ರಿಜ್ವಾನ್ ಎಂಬಾತ ಸಾದಿಕ್‌ನನ್ನು ತಳ್ಳಿದ್ದರಿಂದ ಆತನ ತಲೆಗೆ ಬಲವಾದ ಪೆಟ್ಟು ಬಿದ್ದಿತ್ತು. ಆಸ್ಪತ್ರೆಗೆ ದಾಖಲಿಸುವ ಮಾರ್ಗ ಮಧ್ಯದಲ್ಲಿಯೇ ಸಾದಿಕ್ ಸಾವನ್ನಪ್ಪಿದ್ದಾನೆ. ಘಟನಾ ಸ್ಥಳಕ್ಕೆ ಶಹರ ಠಾಣೆ ಪೊಲೀಸರು ಭೇಟಿ ನೀಡಿ, ಆರೋಪಿ ರಿಜ್ವಾನ್‌ನ್ನು ವಶಕ್ಕೆ ಪಡೆದು ದೂರು ದಾಖಲಿಸಿಕೊಂಡು ತನಿಖೆ ಮುಂದುವರೆಸಿದ್ದಾರೆ.

Related Articles

Leave a Reply

Your email address will not be published. Required fields are marked *