Jannah Theme License is not validated, Go to the theme options page to validate the license, You need a single license for each domain name.
ಧಾರವಾಡಸ್ಥಳೀಯ ಸುದ್ದಿಹುಬ್ಬಳ್ಳಿ

ಸ್ಮಶಾನಕ್ಕಾಗಿ ಅರ್ಜಿ ಆಹ್ವಾನ ಮುಕ್ತ ಅವಕಾಶ ಕಲ್ಪಿಸಿದ : ಡಿ ಸಿ!

Power city news

ಧಾರವಾಡ

ಹುಬ್ಬಳ್ಳಿ ( ಕರ್ನಾಟಕ ವಾರ್ತೆ ) ಮಾ.2: ಸರ್ಕಾರದ ಜಮೀನು ಲಭ್ಯವಿರುವ ಕಡೆ ಉದ್ದೇಶಕ್ಕಾಗಿ 2 ಎಕರೆ ಜಮೀನನ್ನು ಕಾಯ್ದಿರಿಸುವ ಅಧಿಕಾರವನ್ನು ಜಿಲ್ಲಾಧಿಕಾರಿಗಳು ಹೊಂದಿರುತ್ತಾರೆ.

ಕರ್ನಾಟಕ ಭೂ ಕಂದಾಯ ಕಾಯ್ದೆ , 1964 ಕಲಂ 71 ರಡಿ ಜಮೀನುಗಳನ್ನು ಕಾಯ್ದಿರಿಸಲಾಗುತ್ತದೆ. ಗೋಮಾಳ ಜಮೀನು ನಿಗದಿತ ಪ್ರಮಾಣಕ್ಕಿಂತ ಕಡಿಮೆವಿದ್ದಾಗ ಸ್ಮಶಾನಕ್ಕಾಗಿ ಉಪಯೋಗಿಸಬಹುದು.
ಸರ್ಕಾರಿ ಜಮೀನಿನಲ್ಲಿ ಅನಧಿಕೃತವಾಗಿ ಮಾಡುತ್ತಿರುವ ಸಾಗುವಳಿಯನ್ನು ಸಕ್ರಮೀಕರಣಕ್ಕಾಗಿ ಸಲ್ಲಿಸುವ ಅರ್ಜಿಗಳ ಅರ್ಜಿಗಳ ಪೈಕಿ ಅನರ್ಹ ಅರ್ಜಿಗಳು ಇದ್ದಲ್ಲಿ ಜಿಲ್ಲಾಧಿಕಾರಿಗಳ ಹಂತದಲ್ಲಿ ಅನರ್ಹ ಅರ್ಜಿಗಳನ್ನು ವಜಾಗೊಳಿಸಿ ಜಮೀನನ್ನು ಸರ್ಕಾರದ ವಶಕ್ಕೆ ಪಡೆದು ಸ್ಮಶಾನಕ್ಕಾಗಿ ಕಾಯ್ದಿರಿಸಬಹುದು. ಗ್ರಾಮಗಳಲ್ಲಿ ಸ್ಮಶಾನದ ಅವಶ್ಯಕತೆ ಇದ್ದಲ್ಲಿ ಜಿಲ್ಲಾಧಿಕಾರಿಗಳಿಗೆ ಅಥವಾ ತಹಶೀಲ್ದಾರರಿಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

file

ಸರ್ಕಾರಿ ಜಮೀನು, ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರೆ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಅಥವಾ ತಹಶೀಲ್ದಾರ ಅವರಿಗೆ ದೂರು ನೀಡಬಹುದು ಎಂದು ಪ್ರಕಟಣೆ ತಿಳಿಸಿದೆ.

Related Articles

Leave a Reply

Your email address will not be published. Required fields are marked *