BREAKING NEWSGood jobLife StylePolice

ಸಂತೋಷ್ ಲಾಡ್ ನೇತೃತ್ವದಲ್ಲಿ 178 ಕನ್ನಡಿಗರು ಇಂದು ಬೆಂಗಳೂರಿಗೆ!

powercitynews

POWER CITY NEWS/BANGALURUಬೆಂಗಳೂರು, ಎ.24: ಕಾಶ್ಮೀರದ ಪಹಲ್ಗಾಮ್ ನ ಉಗ್ರರ ದಾಳಿಯ ಹಿನ್ನೆಲೆಯಲ್ಲಿ ಕಾಶ್ಮೀರದಿಂದ ಕನ್ನಡಿಗರನ್ನು ಸುರಕ್ಷಿತವಾಗಿ ಕರೆತರಲು ಕರ್ನಾಟಕ ಸರಕಾರ ವ್ಯವಸ್ಥೆ ಕಲ್ಪಿಸಿದೆ.

ಪ್ರವಾಸದ ನಿಮಿತ್ತ ಕಾಶ್ಮೀರಕ್ಕೆ ತೆರಳಿರುವ ಕನ್ನಡಿಗರನ್ನು ಅತ್ಯಂತ ಸುರಕ್ಷಿತವಾಗಿ ತಾಯ್ನಾಡು ಕರ್ನಾಟಕಕ್ಕೆ ಕರೆತರುವ ನಿಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೂಚನೆಯ ಮೇರೆಗೆ ಕಾಶ್ಮೀರಕ್ಕೆ ತೆರಳಿರುವ ಕಾರ್ಮಿಕ ಸಚಿವ ಸಂತೋಷ ಲಾಡ್ ಸಕಲ ವ್ಯವಸ್ಥೆಗಳನ್ನು ಮಾಡಿದ್ದಾರೆ.

ಅದರಂತೆ 178 ಕನ್ನಡಿಗರನ್ನು ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ (ಇಂಡಿಗೋ-6E 9198) ಮೂಲಕ ಇಂದು ಕರೆತರುತ್ತಿದ್ದಾರೆ.

ಇಂದು ಬೆಳಿಗ್ಗೆ 8:45ಕ್ಕೆ ಶ್ರೀನಗರದ ವಿಮಾನ ನಿಲ್ದಾಣದಿಂದ ವಿಶೇಷ ವಿಮಾನ ಹೊರಟಿದ್ದು ಬೆಂಗಳೂರಿನ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ೧೧:40ಕ್ಕೆ ತಲುಪಲಿದೆ ಎನ್ನಲಾಗಿದೆ.

Related Articles

Leave a Reply

Your email address will not be published. Required fields are marked *