5 kg ಅಕ್ಕಿ ಬದಲಿಗೆ ಹಣ ನೀಡುತ್ತಿರುವ ಸಿಎಂ ಸಿಧ್ಧರಾಮಯ್ಯನವರ ನಿರ್ಧಾರ ಸ್ವಾಗತಾರ್ಹ ಎಂದ ಕಾಂಗ್ರೆಸ್ ಮುಖಂಡ ಅರವಿಂದ ಏಗನಗೌಡ್ರ
ಧಾರವಾಡ
ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಪೂರೈಕೆಯಾಗುವ ವರೆಗೆ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆ.ಜಿ ಗೆ ರೂ.34 ರಂತೆ 170 ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದ ಮಾನ್ಯ ಮುಖ್ಯಮಂತ್ರಿಗಳ ಈ ಕ್ರಮ ಸ್ವಾಗತಾರ್ಹ ಎಂದು ಧಾರವಾಡ ಜಿಲ್ಲೆಯ ಕಾಂಗ್ರೆಸ್ ಮುಖಂಡ ಅರವಿಂದ ಎಗನಗೌಡರ ತಿಳಿಸಿದ್ದಾರೆ.
5 ಕೆ.ಜಿ ಅಕ್ಕಿ ಕೊಡಿ, ಉಳಿದ 5 ಕೆ.ಜಿ ಅಕ್ಕಿ ಕೊಡಲು ಆಗದಿದ್ರೆ ಹಣ ಕೊಡಿ ಎಂದು ಬಿಟ್ಟಿ ಉಪದೇಶ ನೀಡುವ ಬಿಜೆಪಿ ನಾಯಕರು ಒಂದು ಬಾರಿಯೂ ಇದು ಬಡವರಿಗಾಗಿ ರೂಪಿಸಿರುವ ಕಾರ್ಯಕ್ರಮ, ಕರ್ನಾಟಕಕ್ಕೆ ಅಕ್ಕಿ ಕೊಡಿ ಎಂದು ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿಲ್ಲ.
ಇದು ರಾಜ್ಯ ಬಿಜೆಪಿ ನಾಯಕರ ನೈಜ ಮುಖ. ಅವರಿಗೆ ಬಡವರಿಗೆ ಅಕ್ಕಿ ನೀಡುವುದಕ್ಕಿಂತ ಅನ್ನಭಾಗ್ಯ ಕಾರ್ಯಕ್ರಮ ಜಾರಿಯಾಗಬಾರದು ಎಂದೇ ಪ್ರಯತ್ನ ಪಡುತ್ತಿದ್ದಾರೆ. ಅವರಿಗೆ ಅನ್ನಭಾಗ್ಯ ಯೋಜನೆಯ ಬಗ್ಗೆ ಮಾತನಾಡುವ ನೈತಿಕತೆ ಇದೆಯೇ ? ಎಂಬ ಪ್ರಶ್ನೆ ಉಧ್ಭವಿಸುತ್ತದೆ.
ಚುನಾವಣಾ ಸಂಧರ್ಭದಲ್ಲಿ 5 ಭಾಗ್ಯಗಳನ್ನು ಘೋಷಣೆ ಮಾಡಿದಾಗ ಬಿಟ್ಟಿ ಭಾಗ್ಯ,ಜನರನ್ನು ಸೋಮಾರಿಗಳನ್ನಾಗಿ ಮಾಡುತ್ತದೆ ಎಂದು ಬೊಬ್ಬೆ ಇಡುತ್ತಿದ್ದ ಬಿಜೆಪಿಗರು,ಕಾಂಗ್ರೆಸ್ ಸರ್ಕಾರ ರಚನೆಯಾದ ಬೆನ್ನಲ್ಲೇ ಭಾಗ್ಯಗಳನ್ನು ಘೋಷಿಸದಿದ್ದರೆ ಹೋರಾಟ ಮಾಡುತ್ತೇವೆ ಎಂದು ನಾಟಕವಾಡಿದ್ದು ರಾಜ್ಯದ ಜನತೆ ಗಮನಿಸುತ್ತಿದೆ.
ಈಗ ಕೇಂದ್ರ ಸರ್ಕಾರಕ್ಕೆ ಅಕ್ಕಿಕೊಡಿ ಎನ್ನುವ ಧೈರ್ಯವಿಲ್ಲದ ಬಿಜೆಪಗರಿಗೆ ಮಾನ್ಯ ಸಿಧ್ದ್ರಾಮಯ್ಯನವರನ್ನು ಟೀಕಿಸುವ ನೈತಿಕತೆಇದೆಯೇ ?ಬಿಜೆಪಿ ನಾಯಕರ ಪರಿಸ್ಥಿತಿ ಕೈಲಾಗದವ ಮೈ ಪರಚಿಕೊಂಡ ಹಾಗೆ ಆಗಿದೆ,ಅವರು ಹತಾಷೆಯಿಂದ ಮಾತನಾಡುವುದನ್ನು ನೋಡಿದರೆ ಅಯ್ಯೋ ಎನಿಸುತ್ತಿದೆ
ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ಮುನಿಯಪ್ಪ ಅವರು ಕೇಂದ್ರ ಸಚಿವ ಪಿಯುಷ್ ಗೋಯಲ್ ಅವರನ್ನು ಭೇಟಿ ಮಾಡಿ ಅಕ್ಕಿ ನೀಡುವಂತೆ ಮನವಿ ಮಾಡಿದರೂ ಬಡವರ ವಿರೋಧಿ ಬಿಜೆಪಿ ಸರ್ಕಾರ ಅಕ್ಕಿ ಬರದಂತೆ ನೋಡಿಕೊಂಡಿದ್ದು ಜಗಜ್ಜಾಹೀರಾಗಿದೆ. ರಾಜ್ಯಕ್ಕೆ ಹೆಚ್ಚುವರಿಯಾಗಿ 2.29 ಲಕ್ಷ ಮೆಟ್ರಿಕ್ ಟನ್ ಅಕ್ಕಿ ಅಗತ್ಯವಿದ್ದು ಇಷ್ಟು ಪ್ರಮಾಣದ ಅಕ್ಕಿಯನ್ನು ಬೇರೆ ರಾಜ್ಯಗಳು ನೀಡಲು ಸಿದ್ಧವಿಲ್ಲವರುವುದರಿಂದ ಮುಕ್ತ ಮಾರುಕಟ್ಟೆ ಮೂಲಕ ಟೆಂಡರ್ ಕರೆದು ಅಕ್ಕಿ ಪೂರೈಕೆಯಾಗುವ ವರೆಗೆ 5 ಕೆ.ಜಿ ಅಕ್ಕಿಯ ಬದಲಿಗೆ ಪ್ರತಿ ಕೆ.ಜಿ ಗೆ ರೂ.34 ರಂತೆ ಹಣವನ್ನು ನೇರವಾಗಿ ಫಲಾನುಭವಿಗಳ ಬ್ಯಾಂಕ್ ಖಾತೆಗೆ ವರ್ಗಾವಣೆ ಮಾಡುತ್ತೇವೆ ಎಂದ ಮಾನ್ಯ ಮುಖ್ಯಮಂತ್ರಿಗಳ ಈ ಕ್ರಮ ಸ್ವಾಗತಾರ್ಹ ಎಂದು ಅಭಿನಂದಿಸಿದ್ದಾರೆ.