Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿಹುಬ್ಬಳ್ಳಿ

2 ಕೋಟಿ ವೆಚ್ಚದ ನಾಲಾ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿದ : ಶೆಟ್ಟರ್!

ಹುಬ್ಬಳ್ಳಿ

ಹುಬ್ಬಳ್ಳಿ ( ಕರ್ನಾಟಕ ವಾರ್ತೆ) ಮಾ.20: ಮಹಾತ್ಮ ಗಾಂಧಿ ನಗರ ವಿಕಾಸ ಯೋಜನೆ ಅಡಿಯಲ್ಲಿ ವಿಕಾಸ ನಗರದ ಸಿದ್ದಲಿಂಗೇಶ್ವರ ಕಾಲೋನಿ ಹಾಗೂ ಶಿವಪುರ ಕಾಲೋನಿ ಉದ್ಯಾನದ ಬಳಿ ತಲಾ 1 ಕೋಟಿ ವೆಚ್ಚದಲ್ಲಿ ನಾಲಾ ತಡೆಗೋಡೆ ನಿರ್ಮಾಣ ಮತ್ತು ರಸ್ತೆ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಶಾಸಕ ಜಗದೀಶ್ ಶೆಟ್ಟರ್ ಹೇಳಿದರು.

ಹುಬ್ಬಳ್ಳಿ ಇಂದು ವಿಕಾಸ ನಗರ ಹಾಗೂ ಶಿವಪುರ ಕಾಲೋನಿಯಲ್ಲಿ ನಾಲಾ ತಡೆಗೋಡೆ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಿ ಅವರು ಮಾತನಾಡಿದರು.

ಶೀಘ್ರಗತಿಯಲ್ಲಿ ಕಾಮಗಾರಿಯು ಪೂರ್ಣಗೊಳ್ಳಬೇಕು. ಯಾವುದೇ ರೀತಿಯ ಕಳಪೆ ಮಟ್ಟದ ಕಾಮಗಾರಿ ಆಗದಂತೆ ಅಧಿಕಾರಿಗಳು ಗಮನಹರಿಸಬೇಕು. ಶಿವಪುರದ ಉದ್ಯಾನದಲ್ಲಿರುವ ರಂಗಮಂದಿರ ಬೀಳುವ ಹಂತವನ್ನು ತಲುಪಿದೆ. ರಂಗಮಂದಿರದ ದುರಸ್ತಿಗೆ ಕ್ರಮ ಕೈಗೊಳ್ಳಲಾಗುವುದು. ಉದ್ಯಾನದ ಸಮಗ್ರ ಅಭಿವೃದ್ಧಿಗೊಳಿಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಉದ್ಯಾನದಲ್ಲಿ ಹಲವಾರು ಸಮಸ್ಯೆಗಳಿವೆ. ಅವುಗಳನ್ನು ಕೂಡಲೇ ಬಗೆಹರಿಸುವಂತೆ ಜಗದೀಶ್ ಶೆಟ್ಟರ್ ಅಧಿಕಾರಿಗಳಿಗೆ ಸೂಚಿಸಿದರು.

ಈ ಸಂದರ್ಭದಲ್ಲಿ ಹುಬ್ಬಳ್ಳಿ ಧಾರವಾಡ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ನಾಗೇಶ ಕಲ್ಬುರ್ಗಿ, ಪಾಲಿಕೆ ಸದಸ್ಯೆ ಸರಸ್ವತಿ ಧೋಂಗಡಿ, ವಿನಾಯಕ ಧೋಂಗಡಿ, ದೇವದಾಸ್ ಹಬೀಬ್ ಸೇರಿದಂತೆ ಪ್ರಮುಖರು ಇದ್ದರು.

Related Articles

Leave a Reply

Your email address will not be published. Required fields are marked *