Jannah Theme License is not validated, Go to the theme options page to validate the license, You need a single license for each domain name.
ಸ್ಥಳೀಯ ಸುದ್ದಿ

ಮಳೆಯಿಂದ‌ ಹಾನಿಗೊಳಗಾದ ಪ್ರದೇಶಗಳಿಗೆ ಮೇಯರ್ ಭೇಟಿ

ಹುಬ್ಬಳ್ಳಿ

ನಿನ್ನೆ ಹುಬ್ಬಳ್ಳಿಯಲ್ಲಿ ಸುರಿದ ಧಾರಾಕಾರ ಮಳೆಯಿಂದಾಗಿ ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಚನ್ನಪೇಟ, ತೋರವಿ ಹಕ್ಕಲ, ಖರಾದಿ ಓಣಿ, ಮೊಯಿನ್ ಪ್ಲಾಟ್, ಹಾಗೂ ಇನ್ನಿತರ ಪ್ರದೇಶಗಳಿಗೆ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ ಮಹಾಪೌರರಾದ ಈರೇಶ ಅಂಚಟಗೇರಿ ರವರು ಭೇಟಿ ನೀಡಿ, ಸಾರ್ವಜನಿಕರ ಆಸ್ತಿ, ಪಾಸ್ತಿಗಳಿಗೆ ಹಾನಿಯುಂಟಾಗಿರುವ ಬಗ್ಗೆ ನಾಗರಿಕರಿಗೆ ಸಾಂತ್ವನ ಹೇಳಿದ್ರು.

ಪಾಲಿಕೆಯ ಅಧಿಕಾರಿಗಳಿಗೆ, ಸದರಿ ಘಟನೆಗಳು ಮುಂದಿನ ದಿನಗಳಲ್ಲಿ ಮರುಕಳಿಸದಂತೆ ಕ್ರಮಕೈಗೊಳ್ಳಲು ಸೂಚನೆ ನೀಡಿದರು.

ಇದೇ ಸಂದರ್ಭದಲ್ಲಿ ನಾಲಾ ಹಾಗೂ ರಾಜಕಾಲುವೆಗಳ ಒತ್ತುವರಿಕೆಯನ್ನು ಮುಲಾಜಿಲ್ಲದೆ ತೆರವುಗೊಳಿಸಬೇಕು ಹಾಗೂ ಒತ್ತುವರಿ ಮಾಡಿದವರ ವಿರುದ್ಧ ನಿರ್ದಾಕ್ಷಣ್ಯವಾಗಿ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಈ ಸಂದರ್ಭದಲ್ಲಿ ಪಾಲಿಕೆಯ ಸದಸ್ಯರಾದ ಶ್ರೀಮತಿ ಚಂದ್ರಿಕಾ ಮೇಸ್ತ್ರಿ ರವರು, ಮಾಜಿ ಮಹಾಪೌರರಾದ ವೆಂಕಟೇಶ ಮೇಸ್ತ್ರಿ ರವರು, ಪಾಲಿಕೆಯ ಅಧಿಕಾರಿಗಳಾದ ಕಾಂಬ್ಳೆ ರವರು, ಹಾಗೂ ಸ್ಥಳೀಯ ನಾಗರಿಕರು ಉಪಸ್ಥಿತರಿದ್ದರು.

Related Articles

Leave a Reply

Your email address will not be published. Required fields are marked *