Jannah Theme License is not validated, Go to the theme options page to validate the license, You need a single license for each domain name.
BREAKING NEWSCITY CRIME NEWSGadagHubballi

ರಸ್ತೆ ಅಪಘಾತ ಸ್ಥಳದಲ್ಲೇ ಇಬ್ಬರ ದುರ್ಮರಣ : ಓರ್ವನ ಸ್ಥಿತಿ ಗಂಭೀರ!

Accident !

POWERCITY NEWS :

ಗದಗ: ಚಾಲಕನ ನಿಯಂತ್ರಣ ತಪ್ಪಿ ಹೆದ್ದಾರಿ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು ಸ್ಥಳದಲ್ಲೇ ಮೃತಪಟ್ಟಿದ್ದು, ಮತ್ತೊಬ್ಬ ಗಂಭೀರವಾಗಿ ಗಾಯಗೊಂಡ ದುರ್ಘಟನೆ ಶುಕ್ರವಾರ ಬೆಳಗಿನ ಜಾವ ಜರುಗಿದೆ.

ಮೃತರು ಬೆಳಗಾವಿ ಜಿಲ್ಲೆಯ ಸವದತ್ತಿ ತಾಲೂಕಿನ ಸಿದ್ದಯ್ಯ ಪಾಟೀಲ್ ಹಾಗೂ ಬಾಬು ತಾರಿಹಾಳ ಎಂಬುವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಮತ್ತೊಬ್ಬ ಶಶಿ ಪಾಟೀಲ್ ಅನ್ನೋರು ಗಂಭೀರವಾಗಿ ಗಾಯಗೊಂಡಿದ್ದು, ಗಾಯಾಳು ಜಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.

ಸಮೀಪದ ಕಳಸಾಪೂರ ಕ್ರಾಸ್ ಬದಳಿಯ ರಾಷ್ಟ್ರೀಯ ಹೆದ್ದಾರಿಯ ಪಕ್ಕದಲ್ಲಿ ಇರುವ ಶೌಚಾಲಯದ ಗೋಡೆಗೆ ಕಾರ್ ಡಿಕ್ಕಿ ಹೊಡೆದಿದೆ.ಡಿಕ್ಕಿಯ ರಭಸಕ್ಕೆ ಕಾರ್‌ನಲ್ಲಿರುವ ಬಲೂನ್ ಬಿಚ್ಚಿದರೂ ಇಬ್ಬರ ಪ್ರಾಣ ಮಾತ್ರ ಉಳಿದಿಲ್ಲ.

ಆಸ್ಪತ್ರೆಗೆ ಗದಗ ಎಸ್ಪಿ ಬಿ.ಎಸ್. ನೇಮಗೌಡ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Related Articles

Leave a Reply

Your email address will not be published. Required fields are marked *