ಹಣಕ್ಕಾಗಿ ಅಪಹರಣ ಹಲವರ ಬಂಧನ!

power citynews/hubballi:ಹಣಕಾಸಿನ ವ್ಯವಹಾರಕ್ಕೆ ಸಂಬಂಧಿಸಿದಂತೆ ನಗರದ ಖಾಸಗಿ ಗುತ್ತಿಗೆದಾರ(contractor) ಮೋಹನ್ ಚವ್ಹಾನ್(mohan) ಎಂಬ ವ್ಯಕ್ತಿಯನ್ನು ಅಪಹರಿಸಿ ಹಣಕ್ಕೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂದಿಸಿದಂತೆ ಪೋಲಿಸರು 10 ಜನ ಆರೋಪಿಗಳನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಎಂದು ಹು-ಧಾ ಪೋಲೀಸ್ ಕಮೀಷನರ್ ಎನ್. ಶಶಿಕುಮಾರ್(nshahikumar) ತಿಳಿಸಿದರು.
ನಗರದಲ್ಲಿಂದು ಸುದ್ದಿಗೋಷ್ಠಿಯಲ್ಲಿ ಗುರುವಾರ ಮಾತನಾಡಿದ ಅವರು, ಕಳೆದ ಬುಧವಾರ ಹುಬ್ಬಳ್ಳಿ ಗೋಕುಲ್ ರೋಡ್ ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಗುತ್ತಿಗೆದಾರ ಮೋಹನ್ ಚವ್ಹಾನ್ ಎಂಬುವರನ್ನು ಬಸಪ್ಪ ದಳವಾಯಿ ಸೇರಿದಂತೆ 15 ಕ್ಕೂ ಅಧಿಕ ಜನರ ತಂಡ ಮಾರಕಾಸ್ತ್ರಗಳನ್ನು ತೋರಿಸಿ, ಹಲ್ಲೆ ಮಾಡಿ ಕಾರಿನಲ್ಲಿ ಅಪಹರಣ ಮಾಡಿಕೊಂಡು ಹೋಗಿದ್ದರು.
ಈ ಕುರಿತು ಗೋಕುಲ್ ರೋಡ್ ಪೋಲೀಸ್ ಠಾಣೆಯಲ್ಲಿ (kidnaped)ಅಪಹರಣಕ್ಕೆ ಒಳಗಾದ ಮೋಹನ್ ಸಹೋದರ ಅರವಿಂದ್ ಚವ್ಹಾನ್ ಎಂಬುವವರು ದೂರು ನೀಡಿದ್ದರು.
ಪ್ರಕರಣಕ್ಕೆ ಸಂಬಂಧಿಸಿದಂತೆ ಕಾರ್ಯಾಚರಣೆಗೆ ಇಳಿದ ಪೆÇಲೀಸರು ನಗರದ ವಿಮಾನ ನಿಲ್ದಾಣದ ಬಳಿ ಕಾರನ್ನು ತಡೆಯಲು ಯತ್ನಿಸಿದ ವೇಳೆ ಪೋಲೀಸರ ಮೇಲೆ ಹಲ್ಲೆಗೆ ಯತ್ನಿಸಿ ಪರಾರಿಯಾಗಿದ್ದರು.
ನಂತರ ಆರೋಪಿಗಳನ್ನು ಬೆನ್ನತ್ತಿದ ಪೋಲೀಸರು ಧಾರವಾಡದ ಕೆ.ಸಿ. ಪಾರ್ಕ್ ಬಳಿ ಪ್ರಮುಖ ಆರೋಪಿ ಬಸಪ್ಪ ದಳವಾಯಿ ಸೇರಿದಂತೆ 10 ಜನರನ್ನು ಪೋಲೀಸರು ವಶಕ್ಕೆ ಪಡೆಯಲಾಗಿದೆ ಎಂದರು.

ಇನ್ನೂ ಅಪಹರಣಕ್ಕೆ ಒಳಗಾಗಿದ್ದ ಗುತ್ತಿಗೆದಾರ ಮೋಹನ್ ಚವ್ಹಾನ್ ನನ್ನು ಬೆಳಗಾವಿ(belagavi) ಜಿಲ್ಲೆ ಬೈಲಹೊಂಗಲ ಬಳಿ ವಶಕ್ಕೆ ಪಡೆಯಲಾಗಿದೆ ಎಂದರು.
ಘಟನೆಗೆ ಸಂಬಂಧಿಸಿದಂತೆ ಹಣಕಾಸಿನ ವ್ಯವಹಾರದ ಕಾರಣಕ್ಕಾಗಿ ಈ ಅಪಹರಣ ನಡೆದಿರುವುದು ಮೇಲ್ನೋಟಕ್ಕೆ ಕಂಡು ಬಂದಿದೆ. ಒಟ್ಟಾರೆ ಈ ಘಟನೆ ಕುರಿತು 3 ಪ್ರಕರಣಗಳನ್ನು ದಾಖಲು ಮಾಡಲಾಗಿದೆ.
ಪ್ರಮುಖ ಆರೋಪಿ ಬಸಪ್ಪ ದಳವಾಯಿ ಮೇಲೆ ವಿವಿಧ ಠಾಣೆಗಳಲ್ಲಿ ಪ್ರಕರಣಗಳು ದಾಖಲಾಗಿರುವ ಮಾಹಿತಿ ಲಭ್ಯವಾಗಿದೆ ಎಂದು ಹೇಳಿದರು.
ಈ ಘಟನೆ ಕುರಿತಂತೆ ಇನ್ನೂ 10ಕ್ಕೂ ಹೆಚ್ಚಿನವರು ಕೃತ್ಯದಲ್ಲಿ ಭಾಗಿಯಾಗಿರುವ ಶಂಕೆ ಇದ್ದು, ಆದಷ್ಟು ಬೇಗ ಅವರನ್ನು ವಶಕ್ಕೆ ಪಡೆಯುವುದಾಗಿ ಮಾಹಿತಿ ನೀಡಿದರು.