armyBREAKING NEWSCITY CRIME NEWSDHARWADhasanKOPPALL&TMANGALURUPolicePolitical newsRainTechTWINCITY

ಜವಾರಿ ಭಾಷೆಯ ಹಾಸ್ಯ ನಟ ಇನ್ನಿಲ್ಲ!

POWER CITYNEWS:ಉಡುಪಿ/ವಿಜಯಪುರ: ಖ್ಯಾತ ಹಾಸ್ಯನಟ ರಾಜು ತಾಳಿಕೋಟೆ (59) ಹೃದಯಾಘಾತದಿಂದ ನಿಧನರಾಗಿದ್ದಾರೆ.

ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನಲ್ಲಿ ರಾಜು ತಾಳಿಕೋಟೆ (Raju Talikote) ಚಿತ್ರಿಕರಣದಲ್ಲಿ ಭಾಗಿಯಾಗಿದ್ದರು. ಭಾನುವಾರ ರಾತ್ರಿ ಚಿತ್ರೀಕರಣ ಮುಗಿಸಿ ರಾತ್ರಿ 11:59 ರ ವೇಳೆಗೆ ವಿಶ್ರಾಂತಿಯಲ್ಲಿದ್ದಾಗ ಉಸಿರಾಟದ ಸಮಸ್ಯೆಯಾಗಿದೆ. ನಂತರ ಅವರನ್ನು ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಆಸ್ಪತ್ರೆಗೆ ಕರೆ ತರಲಾಗಿತ್ತು. ವೆಂಟಿಲೇಟರ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಚಿಕಿತ್ಸೆಗೆ ಸ್ಪಂದಿಸದೇ ಕೊನೆಯುಸಿರೆಳೆದಿದ್ದಾರೆ.

ವಿಜಯಪುರ ಜಿಲ್ಲೆಯ ಸಿಂದಗಿ ತಾಲ್ಲೂಕಿನ ಚಿಕ್ಕಸಿಂದಗಿ ಗ್ರಾಮದ ಮೂಲದವರಾಗಿದ್ದ ಅವರು, ಚಲನಚಿತ್ರದಲ್ಲಿ ಪ್ರಸಿದ್ಧರಾದ ನಂತರ ತಾಳಿಕೋಟೆ ನಗರದಲ್ಲಿ ವಾಸವಾಗಿದ್ದರು.

ರಾಜು ತಾಳಿಕೋಟೆಯವರು ಮೊದಲ ಹೆಸರು ರಾಜೇಸಾಬ ಮಕ್ತುಮಸಾಬ್ ತಾಳಿಕೋಟೆ. ಅವರು ಕೇವಲ ನಟನಾಗಿರದೇ ತಾಳಿಕೋಟೆಯ ಪ್ರಸಿದ್ಧ ಖಾಸ್ಗತೇಶ್ವರ ನಾಟಕ ಮಂಡಳಿಯ ಮಾಲೀಕರಾಗಿದ್ದರು. *ಪ್ರಸ್ತುತ ಅವರು ಧಾರವಾಡ ರಂಗಾಯಣದ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ನನ್ನೊಂದಿಗೆ ಆತ್ಮೀಯ ಒಡನಾಟ ಇರಿಸಿಕೊಂಡಿದ್ದ ರಾಜು ತಾಳಿಕೋಟೆ ಧಾರವಾಡ ರಂಗಾಯಣವನ್ನು ಹೊಸ ದೃಷ್ಟಿಕೋನದೊಂದಿಗೆ ಕಟ್ಟುತ್ತಾರೆ ಎಂಬ ಭರವಸೆ ಇತ್ತು. ಖಾಸ್ಗತೇಶ್ವರ ನಾಟಕ ಮಂಡಳಿ ಎಂಬ ಕಂಪನಿ ಹೊಂದಿದ್ದ ರಾಜು ತಾಳಿಕೋಟೆ ಅನೇಕ ಜನಪ್ರಿಯ ನಾಟಕಗಳ ಮೂಲಕ ಹೆಸರು ಮಾಡಿದ್ದರು.

Related Articles

Leave a Reply

Your email address will not be published. Required fields are marked *