armybangaluruBELAGAVIBREAKING NEWSCITY CRIME NEWSDHARWAD
ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್..?

POWER CITYNEWS: BAGLAKOTEಬಾಗಲಕೋಟೆ, ಅಕ್ಟೋಬರ್ 13: ಸರ್ಕಾರಿ ಸ್ಥಳದಲ್ಲಿ ಆರ್ಎಸ್ಎಸ್ (Ban on RSS activities) ಚಟುವಟಿಕೆಗಳನ್ನು ನಿರ್ಬಂಧಿಸುವ ಕುರಿತು ತಮಿಳುನಾಡು (tamilnadu)ರಾಜ್ಯದ ಕ್ರಮವನ್ನು ಪರಿಗಣಿಸಿ, ಪರಿಶೀಲಿಸುವಂತೆ ಸರ್ಕಾರದ ಮುಖ್ಯಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (cmsiddhramaih)ತಿಳಿಸಿದರು. ಸಚಿವ ಪ್ರಿಯಾಂಕ್ ಖರ್ಗೆಯವರು ಸರ್ಕಾರಿ (govt.places)ಸ್ಥಳಗಳಲ್ಲಿ ಆರ್ಎಸ್ಎಸ್ ಚಟುವಟಿಕೆಗಳನ್ನು(activiteis) ನಿರ್ಬಂಧಿಸಲು ಪತ್ರ ಬರೆದಿರುವ ಬಗ್ಗೆ ಬಾಗಲಕೋಟೆಯಲ್ಲಿ ಸಿಎಂ ಪ್ರತಿಕ್ರಿಯಿಸಿದ್ದಾರೆ.
ಆರ್ಎಸ್ಎಸ್(rss) ಸಂಘಟನೆ ತನ್ನ ಚಟುವಟಿಕೆಗಳಿಗೆ ಸರ್ಕಾರಿ ಸ್ಥಳಗಳನ್ನು ಬಳಸಿಕೊಳ್ಳುತ್ತಿದೆ. ತಮಿಳುನಾಡು ರಾಜ್ಯದಲ್ಲಿ ಇದನ್ನು ನಿರ್ಬಂಧಿಸಿದಂತೆ ರಾಜ್ಯದಲ್ಲಿಯೂ ನಿರ್ಬಂಧಿಸಬೇಕು ಎಂದು ಪತ್ರ ಬರೆದಿದ್ದಾರೆ. ಈ ಬಗ್ಗೆ ಪರಿಶೀಲಿಸಲು ಸೂಚಿಸಲಾಗಿದೆ ಎಂದು ಹೇಳಿದರು.