BREAKING NEWSCITY CRIME NEWSPolicePolitical newsRainTech

ನಾಲ್ಕು ದಿನ ಗುಡುಗು ಸಹಿತ ಭಾರಿ ಮಳೆ 10 ಹೆಚ್ಚು ಜಿಲ್ಲೆಗೆ “ಯಲ್ಲೋ ಅಲರ್ಟ್”!

POWER CITYNEWS: hubballi/ರಾಜ್ಯದಾದ್ಯಂತ ಮುಂಗಾರು ಪೂರ್ವ ಮಳೆ ಚುರುಕುಗೊಂಡಿದ್ದು, ಮುಂದಿನ ಕೆಲವು ದಿನಗಳ ಕಾಲ ಭಾರಿ ಮಳೆಯಾಗುವ ಮುನ್ಸೂಚನೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದ್ದು, ‘ಯೆಲ್ಲೋ ಅಲರ್ಟ್’ ಘೋಷಿಸಲಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

ಎಲ್ಲೆಲ್ಲಿ ಯೆಲ್ಲೋ ಅಲರ್ಟ್​?
ಉತ್ತರ ಒಳನಾಡು ಮತ್ತು ದಕ್ಷಿಣ ಒಳನಾಡಿನ ಕೆಲವು ಜಿಲ್ಲೆಗಳಲ್ಲಿ ಗಂಟೆಗೆ 40 ರಿಂದ 60 ಕಿಲೋಮೀಟರ್ ವೇಗದಲ್ಲಿ ಬಲವಾದ ಬಿರುಗಾಳಿ ಬೀಸಲಿದ್ದು, ಭಾರಿ ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಒಳನಾಡಿನ ಧಾರವಾಡ, ಗದಗ ಮತ್ತು ಹಾವೇರಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆ ಇದ್ದು, ಕಟ್ಟೆಚ್ಚರ ವಹಿಸಲು ಸೂಚಿಸಲಾಗಿದೆ. ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಚಿತ್ರದುರ್ಗ, ಶಿವಮೊಗ್ಗ ಹಾಗೂ ತುಮಕೂರು ಜಿಲ್ಲೆಗಳಲ್ಲಿ ಮುನ್ನೆಚ್ಚರಿಕೆ ಕ್ರಮವಾಗಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

Related Articles

Leave a Reply

Your email address will not be published. Required fields are marked *