Jannah Theme License is not validated, Go to the theme options page to validate the license, You need a single license for each domain name.
BREAKING NEWSCITY CRIME NEWSDHARWAD

ವಿಧಾನ ಪರಿಷತ್ ಚುನಾವಣೆ: ಅಕ್ಟೋಬರ್ 23ಕ್ಕೆ ಮತದಾನ..!

Dakhani

POWER CITYNEWS :HUBBALLI/ಕರ್ನಾಟಕದ ಆಗ್ನೇಯ ಪದವೀಧರರು, ಪಶ್ಚಿಮ ಪದವೀಧರರು, ಈಶಾನ್ಯ ಶಿಕ್ಷಕರು ಹಾಗೂ ಬೆಂಗಳೂರು ಶಿಕ್ಷಕರ ಕ್ಷೇತ್ರ ಸೇರಿದಂತೆ ನಾಲ್ಕು ವಿಧಾನ ಪರಿಷತ್ ಸ್ಥಾನಗಳಿಗೆ ಅಕ್ಟೋಬರ್ 23, 2026ರಂದು ಮತದಾನ ನಡೆಯಲಿದೆ. ಅಕ್ಟೋಬರ್ 27ರಂದು ಮತ ಎಣಿಕೆ ನಡೆಯಲಿದೆ.

ಸೆಪ್ಟೆಂಬರ್ 29ರಿಂದ ನಾಮಪತ್ರ ಸಲ್ಲಿಕೆ ಆರಂಭವಾಗಲಿದ್ದು, ಅಕ್ಟೋಬರ್ 6 ಕೊನೆಯ ದಿನವಾಗಿದೆ.

ಬಿಜೆಪಿ ಈಗಾಗಲೇ ಪಶ್ಚಿಮ ಪದವೀಧರ ಕ್ಷೇತ್ರಕ್ಕೆ ಎಸ್.ವಿ. ಸಂಕನೂರು, ಈಶಾನ್ಯ ಶಿಕ್ಷಕರ ಕ್ಷೇತ್ರಕ್ಕೆ ಶಶೀಲ್ ಜಿ. ನಮೋಶಿ ಹಾಗೂ ಆಗ್ನೇಯ ಪದವೀಧರ ಕ್ಷೇತ್ರಕ್ಕೆ ಕೆ.ಎಂ. ಸುರೇಶ್ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದೆ. ಬೆಂಗಳೂರು ಶಿಕ್ಷಕರ ಕ್ಷೇತ್ರವನ್ನು ಜೆಡಿಎಸ್‌ಗೆ ಬಿಟ್ಟುಕೊಡುವ ಸಾಧ್ಯತೆ ಇದೆ.

ಕಾಂಗ್ರೆಸ್ ನಾಲ್ಕೂ ಕ್ಷೇತ್ರಗಳಿಗೆ ಮೋಹನ್ ಲಿಂಬಿಕಾಯಿ, ಶಶಿ ಹುಲಿಕುಂಟೆಮಠ್, ಶರಣಪ್ಪ ಮಟ್ಟೂರ್ ಹಾಗೂ ಪುಟ್ಟಣ್ಣ ಅವರನ್ನು ಅಭ್ಯರ್ಥಿಗಳಾಗಿ ಘೋಷಿಸಿದೆ.

ಕರ್ನಾಟಕದ ಜೊತೆಗೆ ಬಿಹಾರ, ಮಹಾರಾಷ್ಟ್ರ ಹಾಗೂ ಉತ್ತರ ಪ್ರದೇಶಗಳ ವಿಧಾನ ಪರಿಷತ್ ಸ್ಥಾನಗಳಿಗೂ ಇದೇ ವೇಳಾಪಟ್ಟಿಯಲ್ಲಿ ಚುನಾವಣೆ ನಡೆಯಲಿದೆ.

Related Articles

Leave a Reply

Your email address will not be published. Required fields are marked *