BREAKING NEWSCITY CRIME NEWSDHARWAD

ಮಾಜಿ ಸಚಿವ “ವಿಕೆ” ಕೋರ್ಟ್‌ಗೆ ಶರಣಾಗಲು “ಸುಪ್ರೀಂ “ಸೂಚನೆ!

POWER CITY NEWS

POWER CITYNEWS : DHARWAD/ನವದೆಹಲಿ: ಧಾರವಾಡದ ಬಿಜೆಪಿ ಮುಖಂಡ ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ಶಾಸಕ ವಿನಯ್ ಕುಲಕರ್ಣಿಗೆ ಮತ್ತೆ ಜೈಲು ಸೇರುವ ಪರಿಸ್ಥಿತಿ ಎದುರಾಗಿದೆ. ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನು ಹಾಗೂ ಶಿಕ್ಷೆ ಅಮಾನತು ಆದೇಶವನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಅಲ್ಲದೆ, ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿದೆ.

ನ್ಯಾಯಮೂರ್ತಿಗಳಾದ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ಶ್ರೀ ಚಂದ್ರಶೇಖರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ ಈ ಮಹತ್ವದ ಆದೇಶ ನೀಡಿದೆ.

2026ರ ಏಪ್ರಿಲ್ 15ರಂದು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ಯೋಗೀಶ್ ಗೌಡ ಕೊಲೆ ಪ್ರಕರಣದಲ್ಲಿ ವಿನಯ್ ಕುಲಕರ್ಣಿ ಸೇರಿದಂತೆ ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು. ಏಪ್ರಿಲ್ 17ರಂದು ವಿನಯ್ ಕುಲಕರ್ಣಿ ಸೇರಿದಂತೆ 16 ಮಂದಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿತ್ತು.

ಈ ಆದೇಶವನ್ನು ಪ್ರಶ್ನಿಸಿ ವಿನಯ್ ಕುಲಕರ್ಣಿ ಕರ್ನಾಟಕ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು. ಜುಲೈ 31ರಂದು ಹೈಕೋರ್ಟ್ ಶಿಕ್ಷೆಗೆ ತಡೆ ನೀಡಿ ಜಾಮೀನು ಮಂಜೂರು ಮಾಡಿತ್ತು.

ಹೈಕೋರ್ಟ್ ನೀಡಿದ್ದ ಈ ಆದೇಶವನ್ನು ಪ್ರಶ್ನಿಸಿ ಸಿಬಿಐ ಹಾಗೂ ಕೊಲೆಯಾದ ಯೋಗೀಶ್ ಗೌಡ ಅವರ ಸಹೋದರ ಗುರುನಾಥ ಗೌಡ ಅವರು ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದೀಗ ಸುಪ್ರೀಂ ಕೋರ್ಟ್ ಹೈಕೋರ್ಟ್‌ನ ಜಾಮೀನು ಮತ್ತು ಶಿಕ್ಷೆ ಅಮಾನತು ಆದೇಶವನ್ನು ರದ್ದುಗೊಳಿಸಿದೆ. ಎರಡು ವಾರಗಳೊಳಗೆ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಸೂಚಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಕಾರಣವಾಗಿದೆ.

ಈ ಬೆಳವಣಿಗೆಯಿಂದಾಗಿ ಶಾಸಕ ವಿನಯ್ ಕುಲಕರ್ಣಿ ಮತ್ತೆ ಜೈಲು ಸೇರುವ ಅನಿವಾರ್ಯತೆ ಎದುರಾಗಿದೆ.

Related Articles

Leave a Reply

Your email address will not be published. Required fields are marked *