BREAKING NEWSCITY CRIME NEWS

ಆಕ್ಸಿಸ್ ಬ್ಯಾಂಕ್‌ನಲ್ಲಿ ಹೊತ್ತಿಕೊಂಡ ಬೆಂಕಿ!

Axis bank

POWER CITYNEWS : HUBLI

ಹುಬ್ಬಳ್ಳಿ :ನಗರದ ಬ್ಯಾಂಕವೊಂದರಲ್ಲಿ ಕಾಣಿಸಿಕೊಂಡ ಬೆಂಕಿಯಿಂದಾಗಿ ಕೆಲಹೊತ್ತು ಸಾರ್ವಜನಿಕ ವಲಯದಲ್ಲಿ ಆತಂಕ ಸೃಷ್ಟಿಸಿದ ಘಟನೆ ಗೋಕುಲ ರಸ್ತೆಯ ಆಕ್ಸಿಸ್ ಬ್ಯಾಂಕ್ ನಲ್ಲಿ ನಡೆದಿದೆ.

ಇಲ್ಲಿನ ಗೋಕುಲ ರಸ್ತೆಯ ಅಕ್ಷಯ ಪಾರ್ಕ್ ಸಮೀಪದ ಆಕ್ಸಿಸ್ ಬ್ಯಾಂಕ್‌ನಲ್ಲಿ ಅಚಾನಕ್ಕಾಗಿ ಬೆಂಕಿ ಕಾಣಿಸಿಕೊಂಡಿದೆ. ಇ ವೇಳೆ ದಟ್ಟನೆಯ ಹೊಗೆ ಬರುವುದನ್ನು ಕಂಡ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಇ ವೇಳೆ ಬ್ಯಾಂಕ್ ಸಿಬ್ಬಂದಿಗಳು ಕೂಡಲೇ ಬ್ಯಾಂಕಿಗೆ ಬಂದು ನೋಡುವಷ್ಟರಲ್ಲಿ ಬಿಸಿ ಹೊಗೆ ಸಂಪೂರ್ಣ ಬ್ಯಾಂಕ್ ಆವರಿಸಿದೆ. ವಿಷಯ ಅರಿತ ಅಗ್ನಿಶಾಮಕ ಸಿಬ್ಬಂದಿಗಳು ಬೆಂಕಿ ನಂದಿಸಿದ್ದು ಯಾವುದೆ ಪ್ರಾಣ ಹಾನಿ ಸಂಭವಿಸಿಲ್ಲ ಎನ್ನಲಾಗಿದೆ. ಆದರೆ ಬಸವಜಯಂತಿಯ ಹಿನ್ನೆಲೆಯಲ್ಲಿ ರಜೆ ಇದ್ದುದರಿಂದ ಬ್ಯಾಂಕಿನಲ್ಲಿ ಯಾರೂ ಇರಲಿಲ್ಲ ಎನ್ನಲಾಗಿದೆ.

ಇನ್ನೂ ಘಟನಾ ಸ್ಥಳಕ್ಕೆ ಗೋಕುಲ ರಸ್ತೆ ಪೊಲೀಸರು ಆಗಮಿಸಿ ಘಟನೆಯ ಕುರಿತು ತನಿಖೆ ಕೈಗೊಂಡಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button